ಸಿಎಂ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್ಸ್: ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ
ಭಾರಿ ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರು ನಗರದ ಎಚ್‌ಎಸ್‌ಆರ್ ಬಡಾವಣೆಯ ಹಲವು ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published: 18th October 2021 12:06 PM | Last Updated: 18th October 2021 12:07 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಎಚ್.ಎಸ್.ಆರ್ ಬಡಾವಣೆಯ ಬಿಡ್ಬ್ಯುಎಸ್ ಎಸ್ ಬಿ ಸೀವೇಜ್ ಟ್ರೀಟ್ಮೆಂಟ್ ಪ್ಲಾಂಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ಭಾರಿ ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರು ನಗರದ ಎಚ್‌ಎಸ್‌ಆರ್ ಬಡಾವಣೆಯ ಹಲವು ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು ಮುಂಜಾನೆಯೇ ಖುದ್ದು ಮಳೆಹಾನಿ ಸಮೀಕ್ಷೆ ಮಾಡಲು ನಗರ ಪ್ರದಕ್ಷಿಣೆ ಹೊರಟ ಮುಖ್ಯಮಂತ್ರಿ ಮೊದಲಿಗೆ ಎಚ್ಎಸ್ಆರ್ ಬಡಾವಣೆ, ಒಳಚರಂಡಿ ಮಂಡಳಿ ಮೇಲ್ವಿಚಾರಣೆಯ ಕೊಳಚೆ ನೀರು ಶುದ್ದೀಕರಣ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಎಚ್ಎಸ್ಆರ್ ಲೇಔಟ್ ಬಿಡಿಎ ಕಾಂಪ್ಲೆಕ್ಸ್ ಹತ್ತಿರದ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲಿಸಿದರು. ನಂತರ ಜೆ ಎಸ್ ಎಸ್ ಜಂಕ್ಷನ್ ನಲ್ಲಿನ ಬೃಹತ್ ಚರಂಡಿಯ ಕಾಮಗಾರಿ ವೀಕ್ಷಣೆ ಮಾಡಿದರು. ಅಗತ್ಯ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಕ್ಸ್‌ಫರ್ಡ್ ಇಂಜಿನಿಯರಿಂಗ್ ಕಾಲೇಜು ಮುಂಭಾಗ ಬೃಹತ್ ಮಳೆನೀರು ಚರಂಡಿಯ ಕಾಮಗಾರಿಯನ್ನು ವೀಕ್ಷಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆಯಿಂದಾಗಿ ಹಾಳಾಗಿರುವ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಬಿಬಿಎಂಪಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಬೆಂಗಳೂರಿನ ಆಕ್ಸ್‌ಫರ್ಡ್ ಇಂಜಿನಿಯರಿಂಗ್ ಕಾಲೇಜ್ ಎದುರುಗಡೆಯ ಬೃಹತ್ ಮಳೆನೀರು ಚರಂಡಿಯ ಕಾಮಗಾರಿಯನ್ನು ಮುಖ್ಯಮಂತ್ರಿ @BSBommai ವೀಕ್ಷಣೆ ಮಾಡಿದರು. ಕಾಮಗಾರಿಯನ್ನು ಸಮರ್ಪಕವಾಗಿ ಹಾಗೂ ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. pic.twitter.com/xCqJYVQcmb
— CM of Karnataka (@CMofKarnataka) October 18, 2021