ಉತ್ತರಾಖಂಡ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದ ಸಹಾಯವಾಣಿ ಆರಂಭ
ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ಮತ್ತೆ ತಲೆ ದೋರಿದ್ದು. ಪ್ರವಾಹದಲ್ಲಿ ಸಿಲುಕಿದ ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಸ್ಥಾಪಿಸಿದೆ.
Published: 20th October 2021 12:23 AM | Last Updated: 20th October 2021 12:23 AM | A+A A-

ಉತ್ತರಾಖಂಡ್ ನಲ್ಲಿನ ಮಳೆ ಪರಿಸ್ಥಿತಿ
ಬೆಂಗಳೂರು: ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ಮತ್ತೆ ತಲೆ ದೋರಿದ್ದು. ಪ್ರವಾಹದಲ್ಲಿ ಸಿಲುಕಿದ ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಸ್ಥಾಪಿಸಿದೆ.
ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, 'ಉತ್ತರಾಖಂಡದ ಪ್ರವಾಹದಲ್ಲಿ ಜನರು, ಪ್ರಯಾಣಿಕರು, ಯಾತ್ರಿಕರು, ಪ್ರವಾಸಿಗರು ಮತ್ತು ಸಂದರ್ಶಕರು ಸಿಲುಕಿಕೊಂಡಿದ್ದರೆ ಅವರ ಸಂಬಂಧಿಕರು, ಸ್ನೇಹಿತರು ಈ ಹೆಲ್ಪ್ ಡೆಸ್ಕ್ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಹೇಳಿದ್ದಾರೆ.
ಇದನ್ನು ಓದಿ: ಉತ್ತರಾಖಂಡದಲ್ಲಿ ವರುಣನ ಅಬ್ಬರಕ್ಕೆ 34 ಮಂದಿ ಬಲಿ, ನೈನಿತಾಲದಲ್ಲಿ ಗರಿಷ್ಠ ಸಾವು
ಉತ್ತರಾಖಂಡದಲ್ಲಿ ಸಿಲುಕಿರುವ ಕನ್ನಡಿಗರು ಅಥವಾ ಅವರ ಸಂಬಂಧಿಕರು ಈ ಸಹಾಯವಾಣಿಯನ್ನು ಸಂಪರ್ಕಿಸಬಹುದು ಮತ್ತು ಉತ್ತರಾಖಂಡದ ನೆರೆಯಲ್ಲಿ ಸಿಲುಕಿರುವವರ ಬಗ್ಗೆ ಮಾಹಿತಿ ನೀಡಬಹುದು. ಅದನ್ನು ಅಲ್ಲಿನ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟವರಿಗೆ ಕಾರ್ಯಾಚರಣೆಗೆ ಸಹಾಯವಾಗುವಂತೆ ಕಳುಹಿಸಿಕೊಡಲಾಗುತ್ತದೆ. ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದ ತುರ್ತು ಸಹಾಯವಾಣಿ ಸಂಖ್ಯೆ: 080 – 1070 (Toll Free) ಮತ್ತು 080 – 2234 0676 -ಈ ಸಂಖ್ಯೆಯು ದಿನದ ಎಲ್ಲಾ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಮಾಹಿತಿ ನೀಡಲಾಗಿದೆ.