
ಬಸವರಾಜ ಬೊಮ್ಮಾಯಿ
ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಯಾರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ವರುಣನ ಆರ್ಭಟ: ಉತ್ತರಾಖಂಡದಲ್ಲಿ 42, ಉತ್ತರ ಪ್ರದೇಶದಲ್ಲಿ 4 ಸಾವು; ಕೇರಳದಲ್ಲಿ ಇಡುಕ್ಕಿ ಡ್ಯಾಂ ಓಪನ್
ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಹಾಗೂ ಭೂಕುಸಿತ ಉಂಟಾಗುತ್ತಿದೆ. ಪ್ರವಾಹದಿಂದಾಗಿ ಪ್ರಾಣ ಹಾನಿ ಆಸ್ತಿ ಪಾಸ್ತಿ ಹಾನಿ ಉಂಟಾಗಿದೆ. ಕೇರಳದಲ್ಲಿ ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು ಆತಂಕ ಸೃಷ್ಟಿಯಾಗಿದೆ.