ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

1971ರ ಯುದ್ಧವು ಐತಿಹಾಸಿಕ ಯುದ್ಧ; ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟ: ರಾಜನಾಥ್ ಸಿಂಗ್

1971ರ ಯುದ್ಧವು ಐತಿಹಾಸಿಕ ಯುದ್ಧಗಳಲ್ಲಿ ಒಂದಾಗಿದ್ದು, ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟವಾಗಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬೆಂಗಳೂರು: 1971ರ ಯುದ್ಧ ಐತಿಹಾಸಿಕ ಯುದ್ಧಗಳಲ್ಲಿ ಒಂದಾಗಿದ್ದು, ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟವಾಗಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

2 ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಜನಾಥ್ ಸಿಂಗ್ ಅವರು ಇಂದು ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಯ ರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಭದ್ರತಾ ಪಡೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 3 ದಿನಗಳ ಕಾನ್ಕ್ಲೇವ್ ನಲ್ಲಿ ಪಾಲ್ಗೊಂಡಿದ್ದಕ್ಕಾಗಿ ನಮ್ಮ ವಾಯುಪಡೆ ಸಿಬ್ಬಂದಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. 1971 ರ ಯುದ್ಧವು ಇತಿಹಾಸದ ಕೆಲವು ಯುದ್ಧಗಳಲ್ಲಿ ಒಂದಾಗಿದೆ, ಅದು ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲು ಅಥವಾ ಅಧಿಕಾರವನ್ನು ಪಡೆದುಕೊಳ್ಳಲು ಹೋರಾಡಿದ್ದಲ್ಲ. ಬದಲಿಗೆ ಮಾನವೀಯತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ರಕ್ಷಿಸುವುದು ಮುಖ್ಯ ಉದ್ದೇಶವಾಗಿತ್ತು ಎಂದು ಹೇಳಿದರು.

ಇದಕ್ಕೂ ಮೊದಲು ಏರೋನಾಟಿಕಲ್ ಡೆವೆಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ಗೆ ಭೇಟಿ ನೀಡಿದ ರಕ್ಷಣಾ ಸಚಿವರು, ಲಘು ವಿಮಾನ ತೇಜಸ್ ಸಿಮ್ಯೂಲೇಟರನ್ ಕಾರ್ಯ ವಿಧಾನವನ್ನು ವೀಕ್ಷಿಸಿದರು. ಈ ಕುರಿತ ತಮ್ಮ ಅನುಭವವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಅವರು ಎಲ್ ಸಿಎ ತೇಜಸ್ ಸಿಮ್ಯುಲೇಟರ್ ಚಲಾಯಿಸಿದ ಅನುಭವ ಅದ್ಭುತವಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನಲ್ಲಿಂದು ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಕೇಂದ್ರ - ಡಿ.ಆರ್.ಡಿ.ಒ ಗೆ ಭೇಟಿ ನೀಡಿ ರಕ್ಷಣಾ ಉತ್ಪನ್ನಗಳ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು.

ಈ ಹಿಂದೆ ರಕ್ಷಣಾ ಸಚಿವಾಲಯದ ಸಮಾಲೋಚನಾ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಕಳೆದ ಕೆಲವು ವರ್ಷಗಳಲ್ಲಿ, ಡಿಪಿಎಸ್‌ಯುಗಳ ಮೂಲಕ ಸರ್ಕಾರವು ವಿವಿಧ ರಕ್ಷಣಾ ಸಾಧನಗಳ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಅನುಕೂಲ ಮಾಡಿಕೊಟ್ಟಿದೆ. 2024-25ರ ವೇಳೆಗೆ ರಕ್ಷಣಾ ಉತ್ಪನ್ನಗಳ ರಫ್ತು ಹೆಚ್ಚಿಸುವ ಗುರಿ ಹೊಂದಿದ್ದೇವೆ. ಭಾರತವನ್ನು ಸಾರ್ವಜನಿಕ ಮತ್ತು ಖಾಸಗಿ ವಲಯದ ಸಕ್ರಿಯ ಪಾಲುದಾರಿಕೆಯೊಂದಿಗೆ ರಕ್ಷಣಾ ವಲಯದಲ್ಲಿ ಸ್ವಾವಲಂಬಿಗಳನ್ನಾಗಿ ಮಾಡುವುದು ಮಾತ್ರವಲ್ಲದೆ, ವಿಶ್ವದ ಅಗ್ರ ರಾಷ್ಟ್ರಗಳಲ್ಲಿ ಸ್ಥಾನ ಪಡೆಯುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.
 

Related Stories

No stories found.

Advertisement

X
Kannada Prabha
www.kannadaprabha.com