ಬಾಗಲಕೋಟೆ: ಕಲ್ಲಿಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿದ ಕಾರು; ನಾಲ್ವರ ದುರ್ಮರಣ
ಘಟಪ್ರಭಾ ನದಿಯ ಕಾಲುವೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಜನರ ಪೈಕಿ, ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.
Published: 22nd October 2021 12:06 PM | Last Updated: 22nd October 2021 04:37 PM | A+A A-

ಸಾಂದರ್ಭಿಕ ಚಿತ್ರ
ಬಾಗಲಕೋಟೆ : ಘಟಪ್ರಭಾ ನದಿಯ ಕಾಲುವೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಜನರ ಪೈಕಿ, ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.
In a tragic incident 4 killed & 2 injured after car fell into canal near Halaki village of #Bagalkot in wee hours on Friday. All deceased are in late twenties & residents of #Ramdurag Taluka of #Belagavi. @XpressBengaluru @naushadbijapur @SpBagalkote @RoyalBagalkot @nammabagalkot pic.twitter.com/ayW6ATRrTL
— Mahesh M Goudar। ಮಹೇಶ್ ಮ ಗೌಡರ (@MahiPEN_TNIE) October 22, 2021
ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮಹದೇವ ಗೌಡ, ಎರಿತಾತ, ವಿಜಯ್ ಮತ್ತು ಸುನೀಲ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮುಧೋಳದಿಂದ ರಾಮದುರ್ಗದ ಕಡೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್-ಟಾಟಾ ಏಸ್ ಡಿಕ್ಕಿ, ನಾಲ್ವರ ದುರ್ಮರಣ
ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲುವೆಗೆ ಹಾರಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಲೋಕಾಪುರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.