ಮೈಸೂರಿನಲ್ಲಿ ಡಬಲ್ ಮರ್ಡರ್: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಕೊಲೆ

ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. 
ಸಾಗರ್
ಸಾಗರ್

ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. 

ಶಿವಪ್ರಕಾಶ್ ಮತ್ತು ಲತಾರನ್ನು ಹತ್ಯೆಗೈದು ಪುತ್ರ ಸಾಗರ್ ಪರಾರಿಯಾಗಿದ್ದಾನೆ. ಲತಾ ಮನೆಗೆ ನುಗ್ಗಿದ ಸಾಗರ್ ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.  

ಲತಾ ಮೇಲೆ ಹಲ್ಲೆ ನಡೆಸುವಾಗ ಆಕೆಯ ಪುತ್ರ ನಾಗಾರ್ಜುನ್ ಗೂ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಾಗರ್ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com