100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ಭಾರತ ಹೊಸ ಮೈಲಿಗಲ್ಲು; ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಭಾರತವು ಗುರುವಾರ ಬೆಳಗ್ಗೆ ದಾಖಲೆಯ 100 ಕೋಟಿ ಡೋಸ್ ಲಸಿಕೆ ನೀಡುವ ಮುಖಾಂತರ ಹೊಸ ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದು, ಲಸಿಕೆ ಅಭಿಯಾನ ಆರಂಭವಾಗ 279 ದಿನಗಳಲ್ಲಿ ಭಾರತ 100 ಕೋಟಿ ಡೋಸ್ ಲಸಿಕೆ ಸಾಧನೆ ಮಾಡಿದಂತಾಗಿದೆ. ಈ ನಡುವೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕಕ್ಕೂ ಸ್ಥಾನ ಸಿಕ್ಕಿದೆ.
ಮೈಸೂರಿನಲ್ಲಿ ಲಸಿಕೆ ಅಭಿಯಾನ
ಮೈಸೂರಿನಲ್ಲಿ ಲಸಿಕೆ ಅಭಿಯಾನ

ಬೆಂಗಳೂರು: ಭಾರತವು ಗುರುವಾರ ಬೆಳಗ್ಗೆ ದಾಖಲೆಯ 100 ಕೋಟಿ ಡೋಸ್ ಲಸಿಕೆ ನೀಡುವ ಮುಖಾಂತರ ಹೊಸ ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದು, ಲಸಿಕೆ ಅಭಿಯಾನ ಆರಂಭವಾಗ 279 ದಿನಗಳಲ್ಲಿ ಭಾರತ 100 ಕೋಟಿ ಡೋಸ್ ಲಸಿಕೆ ಸಾಧನೆ ಮಾಡಿದಂತಾಗಿದೆ. ಈ ನಡುವೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕಕ್ಕೂ ಸ್ಥಾನ ಸಿಕ್ಕಿದೆ.

ಮಹಾಮಾರಿ ಕೊರೋನಾ ವೈಸರ್ ವಿರುದ್ಧದ ಹೋರಾಟದ ನಿಟ್ಟಿನಲ್ಲಿ ಇದೇ ವರ್ಷದ ಜನವರಿ 16ರಂದು ದೇಶದಾದ್ಯಂತ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿತ್ತು. ಅತ್ಯಂತ ಅಲ್ಪ ಸಮಯದಲ್ಲಿ ಭಾರವತು ಶತಕೋಟಿ ಸಂಖ್ಯೆ ದಾಟಿರುವುದು, ಕೋವಿಡ್ ವಿರುದ್ಧದ ಹೋರಾಟಕ್ಕೆ ದೇಶದ ಜನರು ಹಾಗೂ ಸರ್ಕಾರ ತೋರಿಸಿರುವ ಭದ್ಧತೆಗೆ ಸಾಕ್ಷಿಯಾಗಿದೆ.

ಭಾರತವು 100 ಕೋಟಿ ಡೋಸ್ ದಾಟುತ್ತಿರುವ ವಿಶ್ವದ 2ನೇ ರಾಷ್ಟ್ರವಾಗಿದೆ. ಇದಕ್ಕೂ ಮೊದಲು ಚೀನಾ ಈ ಸಾಧನೆ ಮಾಡಿದ್ದಾಗಿ ಹೇಳಿಕೊಂಡಿತ್ತು.

ಭಾರತವು ಲಸಿಕೆಗೆ ಅರ್ಹವಿರುವ ಒಟ್ಟಾರೆ ಜನಸಂಖ್ಯೆ ಪೈಕಿ ಶೇ.75ರಷ್ಟು ಮಂದಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡಿದೆ ಜೊತೆಗೆ ಶೇ.31ರಷ್ಟು ಮಂದಿಗೆ ಎರಡೂ ಡೋಸ್ ಗಳನ್ನು ನೀಡಲಾಗಿದೆ. ಒಟ್ಟಾರೆ ಲಸಿಕೆಗೆ ಅರ್ಹರಾಗಿರುವವರಲ್ಲಿ ಶೇ.93ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

9 ರಾಜ್ಯಗಳಲ್ಲಿ ಮೊದಲ ಡೋಸ್ ಲಸಿಕೆ ನೀಡಿಕೆ ಪೂರ್ಣಗೊಳಿಸಲಾಗಿದೆ. ಇನ್ನು ಈ ವರ್ಷಾಂತ್ಯದೊಳಗೆ ಎಲ್ಲರಿಗೂ ಎರಡೂ ಡೋಸ್ ನೀಡಿಕೆಯತ್ತ ಗಮನ ಹರಿಸಲಾಗುವುದು ಎಂದು ತಿಳಿಸಿದೆ.

ಈ ನಡುವೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕಕ್ಕೂ ಸ್ಥಾನ ದೊರೆತಿದ್ದು, ಅಭಿಯಾನ ಆರಂಭವಾದ ದಿನದಿಂದ ಈ ವರೆಗೂ ರಾಜ್ಯದಲ್ಲಿ 6.21 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಈ ಸಾಧನೆಯನ್ನು ವೈದ್ಯಕೀಯ ವೃತ್ತಿಪರರು ಮತ್ತು ತಜ್ಞರು ಶ್ಲಾಘಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದ ಆರಂಭದಿಂದಲೇ ಕರ್ನಾಟಕ ರಾಜ್ಯವು ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದೆ. ಕೋವಿಡ್ ನಿರ್ವಹಣೆಗೆ ಇದೊಂದು ಮಾದರಿ ರಾಜ್ಯವೆಂದು ಪರಿಗಣಿಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆಗಳ ಅಧ್ಯಕ್ಷ ಡಾ.ಸುದರ್ಶನ್ ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಲಸಿಕೆ ಹಾಕುವ ಹೊಣೆ ಹೊತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರಾದ ಡಾ. ಅರುಂದತಿ ಚಂದ್ರಶೇಖರ್ ಅವರು ಮಾತನಾಡಿ, ಹೆಚ್ಚೆಚ್ಚು ಜನರಿಗೆ ಲಸಿಕೆ ನೀಡಲು 9 ತಿಂಗಳ ಕಾಲಾವಕಾಶ ಬೇಕಾಯಿತು. ಲಸಿಕೆ ಅಭಿಯಾನಕ್ಕೆ ಸೂಕ್ತ ರೀತಿಯ ಯೋಜನೆ ಹಾಗೂ ನಿರ್ವಹಣೆ, ಸಹಕಾರದ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಕೋವಿಡ್ ಕುರಿತ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ ಸಿ ಎನ್ ಮಂಜುನಾಥ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ಲಸಿಕೆ ಅಭಿಯಾನ ಅತ್ಯಂತ ಕ್ಲಿಷ್ಟಕರವಾದ ಕಾರ್ಯಾಟರಣೆಯಾಗಿದೆ.ಇದು ಪೂರೈಕೆ ಸರಪಳಿ, ಬೇಡಿಕೆ-ಪೂರೈಕೆ ನಿರ್ವಹಣೆ, ಕಾರ್ಯಾಚರಣೆ ನಿರ್ವಹಣೆ, ಆರೋಗ್ಯ ಕಾರ್ಯಕರ್ತರಲ್ಲಿ ಪ್ರೇರಣೆ ನಿರ್ವಹಣೆಯನ್ನು ಒಳಗೊಂಡಿರುತ್ತದೆ ಮತ್ತು ಸರ್ಕಾರವು ಅದನ್ನು ಉತ್ತಮವಾಗಿ ನಿರ್ವಹಿಸಿದೆ ಎಂದು ಅವರು ಹೇಳಿದ್ದಾರೆ.

ಅಭಿಯಾನ ಆರಂಭವಾದಾಗ ಲಸಿಕೆ ಪಡೆದುಕೊಳ್ಳಲು ಜನರು ಹಿಂಜರಿಯುತ್ತಿದ್ದರು. ಆದರೆ, ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com