ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ತುಮಕೂರು ಬಂದ್​ ಯಶಸ್ವಿ

ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ತುಮಕೂರು ನಗರ ಬಂದ್ ಯಶಸ್ವಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತುಮಕೂರು: ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ತುಮಕೂರು ನಗರ ಬಂದ್ ಯಶಸ್ವಿಯಾಗಿದೆ.

ಶುಕ್ರವಾರ ಬೆಳಿಗ್ಗೆಯಿಂದಲೇ ವರ್ತಕರು ಹಾಗೂ ಹೋಟೆಲ್ ಮಾಲೀಕರು ವ್ಯಾಪಾರ, ವಹಿವಾಟು ಬಂದ್ ಮಾಡಿ, ತುಮಕೂರು ಬಂದ್'ಗೆ ಬೆಂಬಲ ವ್ಯಕ್ತಪಡಿಸಿದರು.

ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್ಯಾಲಿ ಮಾಡುವ ಮೂಲಕ ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆಗೆ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ನಗರದ ಟೌನ್ ಹಾಲ್ ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.  ನಂತರ ಟೌನ್ ಹಾಲ್ ನಿಂದ ಚರ್ಚ್ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬಜರಂಗದಳದ ಕಾರ್ಯಕರ್ತ ಭಾರ್ಗವ ಹಾಗೂ ಕಿರಣ್ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಹಿಂದೂಪರ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದವು.

ಅಕ್ಟೋಬರ್ 19ರಂದು ಸಂಜೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ದುಷ್ಕರ್ಮಿಗಳು ಇಬ್ಬರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲ್ಲೆ ಆರೋಪದ ಮೇರೆಗೆ ಸದ್ಯ ಐವರನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com