ಸಿಂದಗಿ-ಹಾನ್ ಗಲ್ ಉಪಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಸಾಧ್ಯತೆ

 ಸಿಂದಗಿ ಹಾಗೂ ಹಾನ್ ಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವಾರಕ್ಕಿಂತಲೂ ಕಡಿಮೆ ಅವಧಿಯಿದ್ದು, ರಾಜಕೀಯ ಪಂಡಿತರು ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಇರುವ ಸಾಧ್ಯತೆಯನ್ನು ನೋಡುತ್ತಿದ್ದಾರೆ. 
ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಪ್ರಚಾರ
ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಪ್ರಚಾರ

ಬೆಳಗಾವಿ: ಸಿಂದಗಿ ಹಾಗೂ ಹಾನ್ ಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವಾರಕ್ಕಿಂತಲೂ ಕಡಿಮೆ ಅವಧಿಯಿದ್ದು, ರಾಜಕೀಯ ಪಂಡಿತರು ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಇರುವ ಸಾಧ್ಯತೆಯನ್ನು ನೋಡುತ್ತಿದ್ದಾರೆ. 

ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳು ಉಪಚುನಾವಣೆಗೆ ಭರಪೂರ ಪ್ರಚಾರ ಮಾಡಿವೆಯಾದರೂ ಕ್ಷೇತ್ರಗಳಲ್ಲಿನ ಲಿಂಗಾಯತ ಸಮುದಾಯದ ಮತಗಳು ಯಾವ ಪಕ್ಷಕ್ಕೆ ಒಲಿಯಲಿದೆ ಎಂಬುದರ ಮೇಲೆ ಚುನಾವಣೆಯ ಫಲಿತಾಂಶ ನಿರ್ಧಾರವಾಗಲಿದೆ.

ಹಾನ್ ಗಲ್ ಕ್ಷೇತ್ರ ಸಿಎಂ ಬೊಮ್ಮಾಯಿ ಅವರ ಹಾವೇರಿ ಜಿಲ್ಲೆಯಲ್ಲಿರುವುದರಿಂದ ಈ ಕ್ಷೇತ್ರವನ್ನು ಗೆಲ್ಲುವುದು ಸಿಎಂಗೆ ಪ್ರತಿಷ್ಠೆಯ ವಿಷಯವಾಗಿದೆ. ಆದರೆ ಸಿಎಂ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದನ್ನೇ ಮನಸ್ಸಿನಲ್ಲಿಟ್ಟುಕೊಳ್ಳದೇ ಈ ಬಾರಿ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಬಿಜೆಪಿ ಬೆನ್ನಿಗೆ ನಿಲ್ಲುತ್ತಾರಾ? ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಇನ್ನು ಸಿಂದಗಿ ದೀರ್ಘಾವಧಿಯಿಂದಲೂ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದು, ಕಳೆದ 2 ದಶಕಗಳಲ್ಲಷ್ಟೇ ಬಿಜೆಪಿ, ಜೆಡಿಎಸ್ ಗೆ ಅಸ್ತಿತ್ವ ಕಂಡುಕೊಳ್ಳಲು ಅವಕಾಶ ನೀಡಿದೆ. ಸಿಂದಗಿಯ ಶಾಸಕ ಹಾಗೂ ಮಾಜಿ ಸಚಿವ ಎಂಸಿ ಮನಗೂಳಿ ಅವರ ನಿಧನದಿಂದಾಗಿ ಈ ಉಪಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ನಿಂದ 2018 ರ ಚುನಾವಣೆಯಲ್ಲಿ ಬಿಜೆಪಿಯ ರಮೇಶ್ ಭೂಸನೂರ್ ವಿರುದ್ಧ 9,000 ಮತಗಳ ಅಂತರದಿಂದ ಗೆದ್ದಿದ್ದರು.  ಆದರೆ ಮನಗೂಳಿ ನಿಧನದ ನಂತರ ಸಿಂದಗಿಯ ರಾಜಕೀಯ ಚಿತ್ರಣ ಬದಲಾಗಿದ್ದು, ಮನಗೂಳಿ ಪುತ್ರ ಅಶೋಕ್ ಮನಗೂಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು ಅವರನ್ನೇ ಪಕ್ಷ ಕಣಕ್ಕೆ ಇಳಿಸಿದೆ.

ಎಲ್ ಪಿಜಿ, ಪೆಟ್ರೋಲ್, ಡೀಸೆಲ್ ದರ ಏರಿಕೆ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಸೇರಿದಂತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳೇ ಸಿಂದಗಿಯಲ್ಲಿ ಕಾಂಗ್ರೆಸ್ ಗೆ ವರದಾನವಾಗಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಈ ಬಗ್ಗೆ ಮಾತನಾಡಿದ್ದು ಅಶೋಕ್ ಮನಗೂಳಿ ಸಮಾಜದ ಎಲ್ಲಾ ವರ್ಗಗಳ ಬೆಂಬಲವನ್ನೂ ಹೊಂದಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಜೆಡಿಎಸ್ ನ ಅಭ್ಯರ್ಥಿ ನಾಜಿಯಾ ಅಂಗಡಿ ತಮ್ಮ ಗೆಲುವಿನ ಓಟಕ್ಕೆ ಅಡ್ಡಿಯಾಗಲಾರರು ಎಂಬ ವಿಶ್ವಾಸದಲ್ಲಿದ್ದು 35,000 ಮುಸ್ಲಿಮ್ ಮತಗಳು ವಿಭಜನೆಯಾಗಲಿವೆ ಎಂಬುದು ಕೆಲವು ನಾಯಕರ ನಿರೀಕ್ಷೆಯಾಗಿದೆ.

ಅನನುಭವಿ ನಾಯಕರನ್ನು ಕಣಕ್ಕಿಳಿಸಿದ್ದು ಗೆಲುವು ಸಾಧ್ಯವಿಲ್ಲ ಎಂಬುದು ತಿಳಿದಿದ್ದರೂ ಜೆಡಿಎಸ್ ನಾಯಕರು ಪಕ್ಷದಿಂದ ಹೊರನಡೆದ ಅಶೋಕ್ ನ್ನು ಮಣಿಸಬೇಕೆಂಬ ಒಂದೇ ಉದ್ದೇಶದಿಂದ ಹೆಚ್ ಡಿ ದೇವೇಗೌಡ, ಹೆಚ್ ಡಿ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅವರು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಮಹಂತೇಶ್ ಕವಟಗಿಮಠ್ ಹೇಳುತ್ತಾರೆ.

ಇನ್ನು ಲಿಂಗಾಯತ ಮತಗಳನ್ನು ಒಗ್ಗೂಡಿಸುವುದಕ್ಕಾಗಿ ಬಿಜೆಪಿಯಲ್ಲಿ ಯಡಿಯೂರಪ್ಪ, ಬೊಮ್ಮಾಯಿ ಕಳೆದ ಒಂದು ವಾರದಿಂದ ಸದೃಢ ಪ್ರಚಾರ ಕೈಗೊಂಡಿದ್ದು ಆರ್ ಎಸ್ ಎಸ್ ನಿಂದ ವಿರೊಧ ಎದುರಿಸಿದ್ದ ರಮೇಶ್ ಭೂಸನೂರ್ ಮುಸ್ಲಿಮರು ಸೇರಿದಂತೆ ಎಲ್ಲಾ ವರ್ಗಗಳಲ್ಲಿನ ಜನರ ವಿಶ್ವಾಸ ಹೊಂದಿದ್ದಾರೆ. 

ಇನ್ನು ಹಾನಗಲ್ ನಲ್ಲಿ ಸಜ್ಜನರ್ ಯಡಿಯೂರಪ್ಪ ಬೆಂಬಲಿತ, ಬಣದ ನಾಯಕನಾಗಿದ್ದು, ಸ್ಥಳೀಯ ಲಿಂಗಾಯತ ನಾಯಕರಿಂದಲೂ ಬೆಂಬಲ ಪಡೆದಿದ್ದಾರೆ. ಸಿಂದಗಿಯಲ್ಲಿ ಬಿಜೆಪಿ ಗೆಲುವು ಸುಲಭವಾಗಬಹುದು ಆದರೆ ಹಾನಗಲ್ ನಲ್ಲಿ ತುರುಸಿನ ಸ್ಪರ್ಧೆ ಏರ್ಪಡಲಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com