ರಾಜ್ಯ ಸರ್ಕಾರದಿಂದ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ ಅಧಿಸೂಚನೆ ಪ್ರಕಟ

ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ತಂದಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಅಧಿನಿಯಮ 2021ಕ್ಕೆ ರಾಜ್ಯ ಸರ್ಕಾರ ಸೋಮವಾರ....
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ತಂದಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಅಧಿನಿಯಮ 2021ಕ್ಕೆ ರಾಜ್ಯ ಸರ್ಕಾರ ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.

ಕಳೆದ ಮಳೆಗಾಲದ ಅಧಿವೇಶನದಲ್ಲಿ ಎರಡೂ ಸದನಗಲ್ಲಿ ಅಂಗೀಕೃತವಾಗಿರುವ ವಿಧೇಯಕಕ್ಕೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಅವರು ಒಪ್ಪಿಗೆ ನೀಡಿದ್ದು, ರಾಜ್ಯ ಸರ್ಕಾರ ತನ್ನ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ಈ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕಟ್ಟಡಗಳು ಅಂದರೆ, ದೇವಸ್ಥಾನ, ಮಸೀದಿ, ಚರ್ಚ್, ಬಸದಿ, ಬೌದ್ದ ವಿಹಾರ, ಗುರುದ್ವಾರ, ಮಜರ್‌ಗಳನ್ನು ಸದ್ಯ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ಅಥವಾ ಯಾವುದೇ ನ್ಯಾಯಾಲಯ, ನ್ಯಾಯಾಧೀಕರಣ ಅಥವಾ ಪ್ರಾಧಿಕಾರದ ತೀರ್ಪು, ಡಿಕ್ರಿ, ಆದೇಶ ಏನೇ ಇದ್ದರೂ, ಈ ಕಾಯ್ದೆ ಜಾರಿಯಾದ ದಿನದವರೆಗೂ ಸಾರ್ವಜನಿಕ ಸ್ಥಳಗಳಲ್ಲಿ ಅಸ್ತಿತ್ವದಲ್ಲಿರುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತಿಲ್ಲ ಎಂದು ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೈಸೂರಿನ ನಂಜನಗೂಡು ಬಳಿ ಇರುವ ದೇವಾಲಯವನ್ನು ಹಠಾತ್ತನೆ ನೆಲಸಮ ಮಾಡಿದ್ದ ವಿಚಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಬಾರಿ ಕೋಲಾಹಲದ ಚರ್ಚೆಗೆ ಗ್ರಾಸವಾಗಿತ್ತು. ನಂತರ ನೆಲಸಮಗೊಂಡ ಜಾಗದಲ್ಲಿ ದೇವಾಲಯ ನಿರ್ಮಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಅಧಿಕಾರಿಗಳ ಉದ್ಧಟತನದಿಂದ ಇಂತಹ ಘಟನೆಗಳು ಮುಂದೆ ನಡೆಯದಂತೆ ಧಾರ್ಮಿಕ ಸ್ಥಳಗಳ ಸ್ವರೂಪ ಸಂರಕ್ಷಣೆ ಮಾಡುವ ಮಸೂದೆಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಸರ್ಕಾರ ಮಂಡನೆ ಮಾಡಿ, ಅಂಗೀಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com