ಹಾಸನಾಂಬೆ ದರ್ಶನಕ್ಕೆ ಷರತ್ತುಬದ್ಧ ಅವಕಾಶ: ಸಚಿವ ಕೆ.ಗೋಪಾಲಯ್ಯ

ನಗರದ ಹಾಸನಾಂಬೆ ದೇವಿ ದರ್ಶನಕ್ಕೆ ಷರತ್ತು ಬದ್ಧ ಅವಕಾಶ ನೀಡುವುದಾಗಿ ನೀಡುವುದಾಗಿ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಹಾಸನಾಂಬೆ ದೇಗುಲ
ಹಾಸನಾಂಬೆ ದೇಗುಲ

ಹಾಸನ: ನಗರದ ಹಾಸನಾಂಬೆ ದೇವಿ ದರ್ಶನಕ್ಕೆ ಷರತ್ತು ಬದ್ಧ ಅವಕಾಶ ನೀಡುವುದಾಗಿ ನೀಡುವುದಾಗಿ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಇಂದು ಅವರು ಸುದ್ದಿಗಾರೊಂದಿಗೆ ಮಾತನಾಡಿದರು. ಹಾಸನಾಂಬೆ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕುರಿತಂತೆ ಇದ್ದ ಗೊಂದಲಕ್ಕೆ ತೆರೆ ಎಳೆದರು. ಪ್ರತಿವರ್ಷ ದಂತೆ ಈ ವರ್ಷವೂ ೨೮ ರಂದು ಹಾಸನಾಂಬ ದೇವಾಲಯ ಬಾಗಿಲು ತೆರಯಲಿದೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸದೇ ಇರಲು ತೀರ್ಮಾನಿಸಿದ್ದೆವು. ಆದರೆ‌ ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿವೆ, ಕೋವಿಡ್ ಸ್ವಲ್ಪ ಕಡಿಮೆ ಇರುವುದರಿಂದ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸುತ್ತೇವೆ ಎಂದ ಸಚಿವ, ಅ.೨೮, ಮತ್ತು ನ. ೬ ರಂದು ಹೊರತುಪಡಿಸಿ ಉಳಿದ ದಿನಗಳು ದರ್ಶನಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ದರ್ಶನಕ್ಕೆ ಬರುವವರಿಗೆ ವ್ಯಾಕ್ಸಿನ್ ಕಡ್ಡಾಯಗೊಳಿಸಲಾಗಿದೆ. ವ್ಯಾಕ್ಸಿನ್ ಪಡೆದ ದೃಢೀಕರಣ ಪತ್ರ ಮತ್ತು ಗುರುತಿನ ಚೀಟಿ ಕಡ್ಡಾಯ ಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯೋತ್ಸವ ನಿಮಿತ್ತ ಮಾತಾಡ್ ಮಾತಾಡ್ ಕನ್ನಡ ಎಂಬ ವಿಶಿಷ್ಟ ಕಾರ್ಯಕ್ರಮ
66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಾತಾಡ್ ಮಾತಾಡ್ ಕನ್ನಡ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ 24ನೇ ತಾರೀಖಿನಿಂದ 30ನೇ ತಾರೀಖಿನವರೆಗೆ ಜಿಲ್ಲೆಯ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕುಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸಲಾಗುತ್ತಿದೆ. ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಭಾಗವಾಗಿ ಅಕ್ಟೋಬರ್ 28ನೇ ತಾರೀಖು ಬೆಳಗ್ಗೆ 11 ಗಂಟೆಗೆ ಹಾಸನ ಜಿಲ್ಲೆಯಾದ್ಯಂತ ಮೂರು ಕನ್ನಡ ಗೀತೆಗಳನ್ನು ಹಾಡಲಾಗುತ್ತದೆ. ಇದರ ಅಂಗವಾಗಿ ಲಕ್ಷ ಕಂಠ ಗಾಯನ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕುಗಳ ಪ್ರಮುಖ ಐತಿಹಾಸಿಕ, ಪ್ರೇಕ್ಷಣೀಯ ಸ್ಥಳಗಳು ಒಳಗೊಂಡು ಸುಮಾರು 15 ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ. ಸುಮಾರು 25 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ನಮ್ಮ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ  ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವರಾದ ಗೋಪಾಲಯ್ಯ ಅವರು ತಿಳಿಸಿದರು.

ಸರಣಿ ಟ್ವೀಟ್
ಇದೇ ವಿಚಾರವಾಗಿ ಟ್ವೀಟ್ ಮೂಲಕವೂ ಮಾಹಿತಿ ನೀಡಿರುವ ಸಚಿವ ಗೋಪಾಲಯ್ಯ ಅವರು, '೬೬ ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಾಸನ ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 'ಕನ್ನಡಕ್ಕಾಗಿ ನಾವು' ಅಭಿಯಾನ ನಡೆಯಲಿದೆ. ಇದೇ ೨೪ ರಿಂದ  ೩೦ ರವರೆಗೆ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕುಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಅಕ್ಟೋಬರ್ ೨೮ ರ ಬೆಳಗ್ಗೆ ೧೧ ಗಂಟೆಗೆ ಹಾಸನ ಜಿಲ್ಲೆಯಾದ್ಯಂತ ಮೂರು ಕನ್ನಡ ಗೀತೆಗಳನ್ನು ಹಾಡುವ ಲಕ್ಷ ಕಂಠ ಗಾಯನ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕುಗಳ ಪ್ರಮುಖ ಐತಿಹಾಸಿಕ, ಪ್ರೇಕ್ಷಣೀಯ ಸ್ಥಳ ಒಳಗೊಂಡು ಸುಮಾರು ೧೫ ಸ್ಥಳಗಳಲ್ಲಿ ಆಯೋಜಿಸಲಾಗಿದೆ. ಸುಮಾರು ೨೫ ಸಾವಿರ ಜನರು ಜಿಲ್ಲೆಯಿಂದ ಭಾಗವಹಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ 'ರಾಜ್ಯದಲ್ಲಿ ಕೋವಿಡ್ ತೀವ್ರತೆ ಕಡಿಮೆಯಾಗಿರುವುದರಿಂದ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಅ.28 ಮತ್ತು ನ.6 ರಂದು ಹೊರತುಪಡಿಸಿ ಉಳಿದ ದಿನಗಳು ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ದರ್ಶನಕ್ಕೆ ಬರುವವರು ಲಸಿಕೆ ಪಡೆದ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ತೋರಿಸುವುದು ಕಡ್ಡಾಯ' ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com