ಉತ್ತರ ಕರ್ನಾಟಕ ಭಾಗಗಳಲ್ಲಿ ಕಲುಷಿತ ನೀರು ಕುಡಿದು ಹಲವರು ಸಾವು: ವಿಸ್ತೃತ ಯೋಜನೆ ರೂಪಿಸುವಂತೆ ಆರೋಗ್ಯ ಇಲಾಖೆಗೆ ಸರ್ಕಾರ ಸೂಚನೆ

ಕಳೆದ ಕೆಲ ವಾರಗಳಲ್ಲಿ ಉತ್ತರ ಕರ್ನಾಟಕದಲ್ಲಿ ಕಲುಷಿತ ನೀರು ಕುಡಿದು 11 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ನೀಡುವುದು ಸರ್ಕಾರಕ್ಕೆ ಸವಾಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸವಿಸ್ತಾರವಾದ ಯೋಜನೆಯನ್ನು ರೂಪಿಸುವಂತೆ ಸರ್ಕಾರ ಆರೋಗ್ಯ ಇಲಾಖೆಗೆ ಸೂಚಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ಕೆಲ ವಾರಗಳಲ್ಲಿ ಉತ್ತರ ಕರ್ನಾಟಕದಲ್ಲಿ ಕಲುಷಿತ ನೀರು ಕುಡಿದು 11 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ನೀಡುವುದು ಸರ್ಕಾರಕ್ಕೆ ಸವಾಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸವಿಸ್ತಾರವಾದ ಯೋಜನೆಯನ್ನು ರೂಪಿಸುವಂತೆ ಸರ್ಕಾರ ಆರೋಗ್ಯ ಇಲಾಖೆಗೆ ಸೂಚಿಸಿದೆ.

ವಿಜಯನಗರ ಜಿಲ್ಲೆಯ ಮಕರಬ್ಬಿ ಗ್ರಾಮದಲ್ಲಿ ಈ ತಿಂಗಳ ಆರಂಭದಲ್ಲಿ ಏಳು ಜನರು ಮೃತಪಟ್ಟಿದ್ದರು. ಅದಕ್ಕೂ ಮೊದಲು ಕಲಬುರಗಿಯಲ್ಲಿ ಎರಡು ಸಾವುಗಳು ವರದಿಯಾಗಿದ್ದವು. ಮೊನ್ನೆ ಭಾನುವಾರ ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಳೆಯದಾಗಿದ್ದು, ಕೆಲವು ಸೋರಿಕೆಯಿಂದ ಮಾಲಿನ್ಯಕ್ಕೆ ಕಾರಣವಾಗಬಹುದು ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹೇಳುತ್ತಾರೆ. ಇದೊಂದು ಗಂಭೀರ ಸಮಸ್ಯೆಯಾಗಿದ್ದು, ಸರಕಾರ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಅಲ್ಲದೆ, ಹಳ್ಳಿಗಳಲ್ಲಿ ಸರಿಯಾದ ಒಳಚರಂಡಿ ಮತ್ತು ಘನತ್ಯಾಜ್ಯ ನಿರ್ವಹಣೆ ವ್ಯವಸ್ಥೆಗಳಿಲ್ಲ. ಸಮಗ್ರ ಯೋಜನೆ ರೂಪಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದೇನೆ’ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಮಕರಬ್ಬಿ ಗ್ರಾಮದಲ್ಲಿನ ಸಾವಿನ ನಂತರ, ಸರ್ಕಾರವು ಪಂಚಾಯತ್ ಅಧಿಕಾರಿ ಮತ್ತು ಇಬ್ಬರು ಇಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಂಡಿತು. ಮಾಲಿನ್ಯಕ್ಕೆ ಕಾರಣಗಳು ಮತ್ತು ಅದಕ್ಕೆ ಕಾರಣರಾದವರ ಬಗ್ಗೆ ವರದಿಯನ್ನು ಸಿದ್ಧಪಡಿಸುವಂತೆ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಆದೇಶಿಸಿದೆ. ಮೌದ್ಗಿಲ್ ಅವರು ಗ್ರಾಮಕ್ಕೆ ಭೇಟಿ ನೀಡಿ ವರದಿ ಮಂಡಿಸಿದ್ದು, ವರದಿಯ ಆಧಾರದಲ್ಲಿ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ರವಿಕುಮಾರ್ ತಿಳಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವು ಮಾಲಿನ್ಯ ಮತ್ತು ಪರಿಸ್ಥಿತಿ ಉಲ್ಬಣಗೊಳ್ಳಲು ಒಂದು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ನೀರು ಸರಬರಾಜು ಕಾಮಗಾರಿ ವೇಳೆ ಕೊಳಚೆ ನೀರು ಕುಡಿಯುವ ನೀರಿಗೆ ಬೆರೆತಿದ್ದು, ಕಲುಷಿತ ಕುಡಿಯುವ ನೀರಿನಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದರೂ ಅಧಿಕಾರಿಗಳು ಸಕಾಲದಲ್ಲಿ ಕ್ರಮಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ.

ನೀರಿನ ಮಾಲಿನ್ಯವನ್ನು ತಡೆಗಟ್ಟಲು ಗ್ರಾಮ ಮಟ್ಟದಲ್ಲಿ ಉತ್ತಮ ಸಮನ್ವಯವು ಪ್ರಮುಖವಾಗಿದೆ ಎಂದು ತಜ್ಞರು ಹೇಳಿದರು. "ಕ್ಷೇತ್ರ ಮಟ್ಟದಲ್ಲಿ ಸಂಬಂಧಿಸಿದ ಅಧಿಕಾರಿಗಳು ನೀರು ಸರಬರಾಜು ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಬೇಕು, ಇದರಿಂದ ಅವರು ನೀರಿನ ಗುಣಮಟ್ಟವನ್ನು ಮೇಲ್ವಿಚಾರಣೆ ಮಾಡಬಹುದು. ಕೆಲವು ಗ್ರಾಮಗಳಲ್ಲಿ ನಂತರ ನಿರ್ಮಿಸಿದ ಚರಂಡಿಗಳ ಮಧ್ಯದಲ್ಲಿ ನೀರಿನ ಪೈಪ್‌ಲೈನ್‌ಗಳಿವೆ. ಪೈಪ್ ಲೈನ್ ನಲ್ಲಿ ಸಣ್ಣ ಸೋರಿಕೆಯು ಮಾಲಿನ್ಯಕ್ಕೆ ಕಾರಣವಾಗುತ್ತದೆ. ಗ್ರಾಮ ಮಟ್ಟದಲ್ಲಿ ಅಧಿಕಾರಿಗಳು ಸಂವೇದನಾಶೀಲರಾಗಿ ಮತ್ತು ಎಲ್ಲಾ ಗ್ರಾಮಗಳಲ್ಲಿ ಓವರ್‌ಹೆಡ್ ಟ್ಯಾಂಕ್‌ಗಳನ್ನು ಸಕಾಲಿಕವಾಗಿ ಸ್ವಚ್ಛಗೊಳಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ರವಿಕುಮಾರ್ ಹೇಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com