ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ: ಧಾರವಾಡದಲ್ಲಿ 3 ದಿನಗಳ ಕಾಲ ಆರ್‌ಎಸ್‌ಎಸ್‌ ಬೈಠಕ್‌, ಭಾಗವತ್ ಭಾಗಿ

ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಇದೇ 28 ರಿಂದ 30ರವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಧಾರವಾಡ: ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಇದೇ 28 ರಿಂದ 30ರವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಕುರಿತು ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ ಅಂಬೇಕರ ಅವರು ಮಾಹಿತಿ ನೀಡಿದ್ದು, ಸಂಘದ ಮುಂದಿನ ಯೋಜನೆಗಳು ಹಾಗೂ ಅಭಿವೃದ್ಧಿ, ದೇಶ ಹಾಗೂ ನಮ್ಮ ಸ್ವಾಭಿಮಾನದ ಕುರಿತು ತೆಗೆದುಕೊಳ್ಳಬೇಕಾದ ನಿಲುವುಗಳ ಬಗೆಗೆ ಚರ್ಚೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹಾಗೂ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ. 75ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ದೇಶದಲ್ಲಿ ಇದಕ್ಕೆ ಪೂರಕ ಹಾಗೂ ಪ್ರೇರಕ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಚಿಂತನ ಮಂಥನ ನಡೆಯಲಿದೆ. 2025ಕ್ಕೆ ಆರ್‌ಎಸ್‌ಎಸ್ ಶತಮಾನೋತ್ಸವವಿದೆ. 2021 ರಿಂದ 2024ರ ಅವಧಿಯಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ ಪೂರ್ಣ ಪ್ರಮಾಣದ ಬೈಠಕ್ ನಡೆಯಲಿದ್ದು, ಆರ್‌ಎಸ್‌ಎಸ್‌ ಮುಖ್ಯಸ್ಥ, ಸರಸಂಘಚಾಲಕ ಮೋಹನ ಭಾಗವತ್, ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ, ಅಖಿಲ ಭಾರತೀಯ ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಸೇರಿ ದೇಶದ ಸುಮಾರು 350 ಪ್ರತಿನಿಧಿಗಳು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ‘ಸೇವಾ ಭಾರತಿ’ಯ ಅನೇಕ ಕಾರ್ಯಕರ್ತರು ಸೇವೆ ಸಲ್ಲಿಸಿದ್ದಾರೆ. 3ನೇ ಅಲೆ ಎದುರಿಸಲು 1.50 ಲಕ್ಷ ಸ್ಥಳಗಳಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com