ನಿರಾಶ್ರಿತರ ಕೇಂದ್ರಕ್ಕೆ 37 ಭಿಕ್ಷುಕರ ಕಳುಹಿಸಿದ ಪೊಲೀಸರು

ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಹೋಗದೇ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕರ ವಿರುದ್ಧ ಪಶ್ಚಿಮ ವಿಭಾಗದ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನವೇ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ 37 ಭಿಕ್ಷುಕರನ್ನು ಪತ್ತೆ ಮಾಡಿ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಹೋಗದೇ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕರ ವಿರುದ್ಧ ಪಶ್ಚಿಮ ವಿಭಾಗದ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನವೇ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ 37 ಭಿಕ್ಷುಕರನ್ನು ಪತ್ತೆ ಮಾಡಿ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಕಳುಹಿಸಿದ್ದಾರೆ.

‘ಉಪ್ಪಾರಪೇಟೆಯಲ್ಲಿದ್ದ 20, ಕೆ.ಆರ್‌.ಮಾರುಕಟ್ಟೆ ಪ್ರದೇಶದಲ್ಲಿದ್ದ 6, ಬ್ಯಾಟರಾಯನಪುರ, ಚಂದ್ರಾ ಲೇಔಟ್‌ ಹಾಗೂ ಕೆಂಗೇರಿಯಲ್ಲಿದ್ದ ತಲಾ ಮೂವರು ಹಾಗೂ ವಿಜಯನಗರದಲ್ಲಿದ್ದ ಇಬ್ಬರು ಭಿಕ್ಷುಕರನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ.

ಮೆಜೆಸ್ಟಿಕ್‌ ಬಸ್‌ ನಿಲ್ದಾಣ, ಅಣ್ಣಮ್ಮನ ದೇವಸ್ಥಾನದ ಸುತ್ತಮುತ್ತ ಗುರುವಾರವೂ ಕಾರ್ಯಾಚರಣೆ ನಡೆಸಲಾಗುತ್ತದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com