ಉತ್ತರ ಪ್ರದೇಶ ಮಾದರಿಯಲ್ಲಿಯೇ ಪರಿಹಾರ ನೀಡಿ:  ಬೆಳಗಾವಿ ಕೋವಿಡ್ ಸಂತ್ರಸ್ತರ ಮನವಿ

ಏಪ್ರಿಲ್ ತಿಂಗಳಲ್ಲಿ ಬೆಳಗಾವಿ ಲೋಕಸಭೆ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆ ಸಮಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಾವನ್ನಪ್ಪಿದ ಹಲವಾರು ಸರ್ಕಾರಿ ನೌಕರರ ಕುಟುಂಬದ ಸದಸ್ಯರು ಉತ್ತರ ಪ್ರದೇಶ ಮಾದರಿಯಲ್ಲಿಯೇ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಏಪ್ರಿಲ್ ತಿಂಗಳಲ್ಲಿ ಬೆಳಗಾವಿ ಲೋಕಸಭೆ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆ ಸಮಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಾವನ್ನಪ್ಪಿದ ಹಲವಾರು ಸರ್ಕಾರಿ ನೌಕರರ ಕುಟುಂಬದ ಸದಸ್ಯರು ಉತ್ತರ ಪ್ರದೇಶ ಮಾದರಿಯಲ್ಲಿಯೇ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕೋವಿಡ್ ಸಂತ್ರಸ್ತರ ಸಂಬಂಧಿಕರು ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದಾರೆ.  ಏಪ್ರಿಲ್ ಮತ್ತು ಮೇನಲ್ಲಿ ಕೋವಿಡ್ -19 ಪ್ರಕರಣಗಳು ಉಲ್ಬಣಗೊಂಡಿದ್ದರೂ, ಕರ್ನಾಟಕದಲ್ಲಿ ಅನುದಾನರಹಿತ ಮತ್ತು ಅನುದಾನಿತ ಶಾಲಾ ಕಾಲೇಜುಗಳ ನೌಕರರು ಸೇರಿದಂತೆ ಸಾವಿರಾರು ಸರ್ಕಾರಿ ನೌಕರರು ತಮ್ಮ ಜೀವದ ಅಪಾಯವನ್ನು ಲೆಕ್ಕಿಸದೆ ಸರ್ಕಾರದ ಆದೇಶದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.

ಮನವಿ ಪತ್ರ ಸ್ವೀಕರಿಸಿದ ಬೆಳಗಾವಿಯ ಉಪ ಆಯುಕ್ತರು ಚುನಾವಣಾ ಆಯೋಗಕ್ಕೆ ಬರೆದ ಪತ್ರವನ್ನು ಉಲ್ಲೇಖಿಸಲಾಗಿದೆ. ಬೆಳಗಾವಿ ಉಪ ಆಯುಕ್ತರು ಸ್ವೀಕರಿಸಿದ 39 ಪ್ರಸ್ತಾವನೆಗಳಲ್ಲಿ 8 ಮಾತ್ರ ಬೆಳಗಾವಿಯಿಂದ ಪರಿಹಾರಕ್ಕಾಗಿ ಶಿಫಾರಸು ಮಾಡಲಾಗಿದೆ ಎಂದರು.

ಚುನಾವಣಾ ಕರ್ತವ್ಯ ನಿರ್ವಹಿಸುವಾಗ ಹೆಚ್ಚಿನ ಸಂಖ್ಯೆಯ ನೌಕರರು ವೈರಸ್‌ಗೆ ತುತ್ತಾಗಿದ್ದಾರೆ ಮತ್ತು ಅವರಲ್ಲಿ ಅನೇಕರು ಸಾವನ್ನಪ್ಪಿದ್ದಾರೆ ಎಂದು ಶಿಕ್ಷಕಿಯಾಗಿದ್ದ ಪತ್ನಿಯನ್ನು ಚುನಾವಣಾ ಕರ್ತವ್ಯದಲ್ಲಿ ಕಳೆದುಕೊಂಡ ಬಾಲಚಂದ್ರ ಜಾಬಶೆಟ್ಟಿ ಹೇಳಿದರು.

ಒಂದು ಕಡೆ ಡಿಸಿ ಪರಿಹಾರ ನೀಡಲು ಮಾರ್ಗಸೂಚಿ ಕೊರತೆ ಇದೆ ಎಂದು ಹೇಳಿದರೆ ಮತ್ತೊಂದೆಡೆ ಪರಿಹಾರಕ್ಕೆ ಕೇವಲ ಎಂಟು ಪ್ರಸ್ತಾವನೆಗಳನ್ನು ಶಿಫಾರಸ್ಸು ಮಾಡಿರುವುದು ಅಚ್ಚರಿ ಮೂಡಿಸಿದೆ. ಇದು ತಾರತಮ್ಯವಲ್ಲವೇ ಎಂದು ಪ್ರಶ್ನಿಸಿದರು. ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಕರ್ತವ್ಯದ ವೇಳೆ ಕೋವಿಡ್‌ಗೆ ಬಲಿಯಾದ ಸರ್ಕಾರಿ ನೌಕರರ ಕುಟುಂಬಕ್ಕೆ ಯುಪಿ ಸರ್ಕಾರ 30 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com