ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಹಂಪಿಯನ್ನು ಅಭಿವೃದ್ಧಿಪಡಿಸಬೇಕು: ಸಚಿವ ಆನಂದ್ ಸಿಂಗ್

ವಿಶ್ವ ಪಾರಂಪರಿಕ ಮತ್ತು ಯುನೆಸ್ಕೋ ಸಂರಕ್ಷಿತ ತಾಣ ಹಂಪಿಯ ಸುಧಾರಣೆ ಮತ್ತು ಮರುಸ್ಥಾಪನೆ ಕಾರ್ಯವನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು, ಗುರುವಾರ ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಮತ್ತೊಂದು ಮನವಿಯನ್ನು ಮಾಡಿಕೊಂಡಿದ್ದಾರೆ.

ಬೆಂಗಳೂರು: ವಿಶ್ವ ಪಾರಂಪರಿಕ ಮತ್ತು ಯುನೆಸ್ಕೋ ಸಂರಕ್ಷಿತ ತಾಣ ಹಂಪಿಯ ಸುಧಾರಣೆ ಮತ್ತು ಮರುಸ್ಥಾಪನೆ ಕಾರ್ಯವನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು, ಗುರುವಾರ ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಮತ್ತೊಂದು ಮನವಿಯನ್ನು ಮಾಡಿಕೊಂಡಿದ್ದಾರೆ.

ಸಾಂಸ್ಕೃತಿಕ ತಾಣಗಳೆಂದು ಕೇಂದ್ರ ಸಚಿವಾಲಯ ಘೋಷಿಸಿದ್ದ 19 ತಾಣಗಳಲ್ಲಿ ಹಂಪಿ ಕೂಡ ಒಂದಾಗಿದ್ದು, ಹೀಗಾಗಿ ಸಾಂಸ್ಕೃತಿಕ ಪ್ರವಾಸೋದ್ಯಮ ಯೋಜನೆಯಡಿಯಲ್ಲಿ ಹಂಪಿಯನ್ನು ಅಭಿವೃದ್ಧಿಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ವೆಸ್ಟ್ ಎಂಡ್‌ ಹೋಟೆಲ್‌ನಲ್ಲಿ ಗುರುವಾರ ಆರಂಭವಾದ ದಕ್ಷಿಣ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಎರಡು ದಿನಗಳ ಸಮ್ಮೇಳನದಲ್ಲಿ ಭಾಗವಹಿಸಿದ ಸಚಿವರು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದಾರೆ.

ಕಳೆದ 20 ವರ್ಷಗಳಲ್ಲಿ ಹಂಪಿಯಲ್ಲಿ ಅಭಿವೃದ್ಧಿ ಕಾರ್ಯಗಳು ಇನ್ನೂ ಆರಂಭಿಕ ಹಂತದಲ್ಲಿದೆ ಮತ್ತು ಹೆಚ್ಚಿನ ಕೆಲಸಗಳು ಯೋಜನಾ ಹಂತದಲ್ಲಿಯೇ ಉಳಿದಿವೆ. ಸಚಿವಾಲಯವು ಸಿದ್ಧಪಡಿಸಿದ ಮಾಸ್ಟರ್ ಪ್ಲಾನ್‌ನಲ್ಲಿ ಪಟ್ಟಿ ಮಾಡಲಾದ ಎಲ್ಲಾ ಸ್ಥಳಗಳಿಗೆ ನಾನು ಭೇಟಿ ನೀಡಿದ್ದೇನೆ ಮತ್ತು ಸಲಹೆಗಾರರ ತಂಡಗಳಿಗೆ ಹಲವು ಶಿಫಾರಸುಗಳನ್ನು ನೀಡಿದ್ದೇನೆ. ಹಂಪಿಯನ್ನು ಕೇಂದ್ರ ಸರ್ಕಾರ ಸಾಂಸ್ಕೃತಿಕ ಪ್ರವಾಸೋದ್ಯಮ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಬೇಕಿದೆ ಎಂದು ಹೇಳಿದ್ದಾರೆ.

ಹಂಪಿಯು ಇತರೆ ಪಾರಂಪರಿಕ ತಾಣಗಳಿಗಿಂತ ಭಿನ್ನವಾಗಿದ. ಹಂಪಿಯಲ್ಲಿ ಪ್ರತಿದಿನ ಪೂಜೆಗಳನ್ನು ನಡೆಸಲಾಗುತ್ತಿದೆ. ಈ ಸ್ಥಳಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಅಡಿಯಲ್ಲಿ ತಂದ ನಂತರ, ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ ಮತ್ತು ಚಲನಚಿತ್ರ ಚಿತ್ರೀಕರಣಕ್ಕೆ ಅನುಮತಿ ನೀಡಲಾಗುತ್ತಿಲ್ಲ. 2011ರಲ್ಲಿ, ವಿರೂಪಾಕ್ಷ ದೇವಸ್ಥಾನದ ಎದುರಿನ ಮಾರ್ಕೆಟ್‌ಅನ್ನು ತೆರವುಗೊಳಿಸಲಾಯಿತು. ಆದರೆ, ದಶಕ ಕಳೆದರೂ ಮರುನಿರ್ಮಾಣ ಮಾಡಿಲ್ಲ. ಅಕ್ಷಯ್ ಕುಮಾರ್ ಸಿನಿಮಾ ಚಿತ್ರೀಕರಣಕ್ಕೆ ಒಬ್ಬ ಅಧಿಕಾರಿ ಅವಕಾಶ ನಿರಾಕರಿಸಿದ ಬಳಿಕ ಯಾರೂ ಚಿತ್ರೀಕರಣಕ್ಕೆ ಬರುತ್ತಿಲ್ಲ. ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿದರೆ ಪ್ರೇಕ್ಷಣೀಯ ಸ್ಥಳಗಳ ಪ್ರಚಾರಕ್ಕೆ ಅನುಕೂಲವಾಗುತ್ತದೆ. ಏಕಗವಾಕ್ಷಿ ವ್ಯವಸ್ಥೆ ಮೂಲಕ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು. ಶಿಲ್ಪಕಲೆಯನ್ನು ಸ್ಪರ್ಶಿಸಲು ಅವಕಾಶ ನೀಡದೆ, ವಿಠಲರಾಯ ದೇವಸ್ಥಾನದೊಳಗೆ ಪ್ರವೇಶಕ್ಕೆ ಅವಕಾಶ ನೀಡಬೇಕು’ ಎಂದರು.

ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಹೆಚ್ಚುವರಿ ಮಹಾನಿರ್ದೇಶಕ ರೂಪಿಂದರ್ ಬ್ರಾರ್ ಮಾತನಾಡಿ, ಸ್ಮಾರಕ ಮಿತ್ರ ಯೋಜನೆಯಡಿ ತಾಣಗಳನ್ನು ದತ್ತು ಪಡೆದುಕೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಇದು ತೆರಿಗೆ ಮುಕ್ತವಾಗಲಿದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಆನಂದ್ ಸಿಂಗ್ ಅವರು, ಈ ಬಗ್ಗೆ ರಾಜ್ಯದಲ್ಲಿ ಪ್ರಚಾರ ಕಾರ್ಯಗಳು ನಡೆಯುತ್ತಿಲ್ಲ. ಅದನ್ನು ನಡೆಸುವುದು ಅಗತ್ಯವಿದೆ ಎಂದು ಒತ್ತಾಯಿಸಿದರು.

Related Stories

No stories found.

Advertisement

X
Kannada Prabha
www.kannadaprabha.com