ಬಿಟ್ ಕಾಯಿನ್ ದಂಧೆ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಟ್‌ ಕಾಯಿನ್‌ ವಿಚಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ರಾಜಕಾರಣಿಗಳು, ಪೊಲೀಸ್‌ ಅಧಿಕಾರಿಗಳು ಸೇರಿ ಯಾರೇ ಭಾಗಿಯಾಗಿದ್ದರೂ ಪತ್ತೆ ಮಾಡಿ ಶಿಕ್ಷೆಗೊಳಪಡಿಸಲಾಗುವುದು, ‘ಈ ವಿಚಾರವಾಗಿ ಸಿಐಡಿ ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ನಾನು ಯಾವುದೇ ಹೇಳಿಕೆ ನೀಡಿದರೂ ತನಿಖೆಗೆ ತೊಂದರೆ ಆಗುತ್ತದೆ. ನಮ್ಮ ಪೊಲೀಸರು ಆಳಕ್ಕೆ ಹೋಗಿ ಮಾಹಿತಿ ತೆಗೆಯುತ್ತಾರೆಂದು ಹೇಳಿದ್ದಾರೆ.

ವಿರೋಧಪಕ್ಷದ ನಾಯಕರು ಚುನಾವಣೆ ಸಂದರ್ಭದಲ್ಲಿ ಯಾರದ್ದೋ ಮುಖಕ್ಕೆ ಮಸಿ ಹಚ್ಚಲು ಹೋಗಬಾರದು. ಅವರು ಹಿಂದೆ ಮುಖ್ಯಮಂತ್ರಿ ಆಗಿದ್ದರು. ಇಂತಹ ವಿಚಾರಗಳನ್ನು ಪಕ್ಷಾತೀತವಾಗಿ ಯೋಚಿಸಬೇಕು. ಅಸ್ಪಷ್ಟವಾಗಿ ಹೇಳಿಕೆ ನೀಡುವುದು ಸರಿಯಲ್ಲ, ರಾಜಕಾರಣಿಗಳು ಕಾಂಗ್ರೆಸ್‌ನವರೇ  ಇರಬಹುದು, ಬಿಜೆಪಿಯವರೇ ಆಗಿರಬಹುದು. ಅಪರಾಧಿಗಳನ್ನು ಕಾನೂನಿನ ಸೂತ್ರದಡಿ ತರಲಾಗುತ್ತದೆ. ತಪ್ಪು ಮಾಡಿದ್ದರೆ ಶಿಕ್ಷೆ ಆಗುತ್ತದೆ ಎಂದು ತಿಳಿಸಿದರು.

ಈ ಪ್ರಕರಣದ ತನಿಖೆಯನ್ನು ಪರಿಣತಿ ಹೊಂದಿರುವ ಪೊಲೀಸರೇ ನಡೆಸುತ್ತಿದ್ದಾರೆ. ಆದ್ದರಿಂದ ಬಿಟ್‌ ಕಾಯಿನ್‌ ವಿಚಾರವಾಗಿ ಅಂತೆ–ಕಂತೆಗಳನ್ನು ಕೇಳಿಕೊಂಡು ಮಾತನಾಡುವುದು ಸರಿಯಲ್ಲ. ಹಗರಣದಲ್ಲಿ ಪೊಲೀಸರೇ ಭಾಗಿಯಾಗಿದ್ದರೂ ಕೂಡ ಅವರಿಗೆ ಶಿಕ್ಷ ನೀಡಲಾಗುತ್ತದೆ ಎಂದರು.

ಏನಿದು ಬಿಟ್ ಕಾಯಿನ್ ಪ್ರಕರಣ?
ಕಳೆದ ವರ್ಷ ಸಿಸಿಬಿ ಬಲೆಗೆ ಬಿದ್ದಿದ್ದ ಬಿಟ್ ಕಾಯಿನ್ ದಂಧೆಯ ಅಂತರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕಾಂತ್ ಅಲಿಯಾಸ್ ಶ್ರೀಕಿ ಬಂಧನ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ.

ಡಾರ್ಟ್ ನೆಟ್ ನಲ್ಲಿ ಡ್ರಗ್ಸ್ ಖರೀದಿ ಹಾಗೂ ಮಾರಾಟ ಪ್ರಕರಣ ಸಂಬಂಧ ಶ್ರೀಕಿಯನ್ನು ಬಂಧಿಸಿದ್ದ ಸಿಸಿಬಿ, ಆತನನ್ನು ವಿಚಾರಣೆ ನಡೆಸಿದಾಗ ಬಿಟ್ ಕಾಯಿಲ್ ದಂಧೆ ಬೆಳಕಿಗೆ ಬಂದಿತ್ತು. ಆಗ ಆರೋಪಿಯಿಂದ ರೂ.9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಗಳನ್ನು ಸಿಸಿಬಿ ಜಪ್ತಿ ಮಾಡಿತ್ತು. ಈ ಪ್ರಕರಣದ ತನಿಖೆ ಪೂರ್ಣಗೊಳಿಸಿದ ಸಿಸಿಬಿ, ಇದೇ ವರ್ಷದ ಮಾರ್ಚ್ ನಲ್ಲಿ ಆತನ ಮೇಲೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು.

ವಿದೇಶದಿಂದ ಡ್ರಗ್ಸ್ ಖರೀದಿಗೆ ಗಣ್ಯರಮಕ್ಕಳು ಬಿಟ್ ಕಾಯಿನ್ ಬಳಸುತ್ತಿದ್ದರು. ಹೀಗಾಗಿ ಬಿಟ್ ಕಾಯಿನ್ ಪಡೆಯುವ ಸಲುವಾಗಿ ಶ್ರೀಕಿ ನೆರವನ್ನು ಅವರು ಪಡೆದಿದ್ದರು. ಸಿಸಿಬಿ ತನಿಖೆ ವೇಳೆ 3 ಬಿಟ್ ಕಾಯಿನ್ ಎಕ್ಸ್ ಚೇಂಜ್ ಏಜೆನ್ಸಿಗಳು, 10 ಪೋಕರ್ ವೆಬ್ ಸೌಟ್ ಗಳು ಹಾಗೂ 3 ಮಾಲ್ ವೇರ್ ಎಕ್ಸ್ ಪ್ಲೋಟೆಡ್ ನ್ನು ಶ್ರೀಕಿ ಹ್ಯಾಕ್ ಮಾಡಿದ್ದು ಬೆಳಕಿಗೆ ಬಂದಿತ್ತು.

ಈ ಸಂಬಂಧ ವಿದೇಶ ಕಂಪನಿಗಳಿಗೆ ಇಂಟರ್ ಪೋಲ್ ಮುಖಾಂತರ ಸಿಸಿಬಿ ಮಾಹಿತಿ ಸಹ ನೀಡಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಯಿಂದ ಹಣ ಜಪ್ತಿ ಮಾಡಿದ್ದ ಸಿಐಡಿ ಅಧಿಕಾರಿಗಳು, ಶ್ರೀಕಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದರು, ಸಿಐಟಿ ಕೂಡ ಪ್ರಾಥಮಿಕ ಹಂತದ ಆರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com