ಕಂಠೀರವ ಕ್ರೀಡಾಂಗಣದಲ್ಲಿ ಅಪ್ಪು ಪಾರ್ಥಿವ ಶರೀರ: ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂತ್ಯಸಂಸ್ಕಾರ

ಭಾನುವಾರ ಪೂರ್ತಿ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಭಾನುವಾರ ಸರ್ಕಾರಿ ಗೌರವದೊಡನೆ ಅಂತ್ಯಕ್ರಿಯೆ ನಡೆಯಲಿದೆ.
ಪುನೀತ್ ರಾಜ್ ಕುಮಾರ್
ಪುನೀತ್ ರಾಜ್ ಕುಮಾರ್

ಬೆಂಗಳೂರು: ಸದಾಶಿವನಗರದ ನಿವಾಸದಿಂದ ಕಂಠೀರವ ಕ್ರೀಡಾಂಗಣಕ್ಕೆ ಪುನೀತ್ ರಾಜಕುಮಾರ್ ಪಾರ್ಥಿವ ಶರೀರ ಸ್ಥಳಾಂತರಿಸಲಾಗಿದ್ದು, ದರ್ಶನಕ್ಕಾಗಿ ಸಾವಿರಾರು ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಅಶ್ವತ್ಥನಾರಾಯಣ, ಮುರುಗೇಶ್ ನಿರಾಣಿ, ಆರ್ ಅಶೋಕ, ಬಿ.ಸಿ ಪಾಟೀಲ್, ಬೈರತಿ ಬಸವರಾಜ್ ಸೇರಿದಂತೆ ಹಲವು ಗಣ್ಯರು ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದಿದ್ದಾರೆ.

ಶನಿವಾರ(ಅಕ್ಟೋಬರ್ 30) ಪೂರ್ತಿ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಭಾನುವಾರ ಸರ್ಕಾರಿ ಗೌರವದೊಡನೆ ಅಂತ್ಯಕ್ರಿಯೆ ನಡೆಯಲಿದೆ. ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ಕಂಠೀರವ ಸ್ಟುಡಿಯೊ ಆವರಣದಲ್ಲಿಯೇ ನಡೆಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.  ಎಲ್ಲಕ್ಕಿಂತ ಮುಖ್ಯವಾಗಿ ಡಾ. ರಾಜಕುಮಾರ್ ಅವರ ಸಮಾಧಿ ಬಳಿಯಲ್ಲಿಯೇ ಪುತ್ರ ಪುನೀತ್ ರಾಜಕುಮಾರ್ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com