ಪುನೀತ್ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ: ಸಾರ್ವಜನಿಕರಿಗೆ ಅವಕಾಶವಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪುನೀತ್, ಸಿಎಂ ಬೊಮ್ಮಾಯಿ ಸಾಂದರ್ಭಿಕ ಚಿತ್ರ
ಪುನೀತ್, ಸಿಎಂ ಬೊಮ್ಮಾಯಿ ಸಾಂದರ್ಭಿಕ ಚಿತ್ರ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಕಂಠೀವರ ಸ್ಟುಡಿಯೋದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಂಠೀವರ ಕ್ರೀಡಾಂಗಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಪುನೀತ್ ರಾಜ್ ಕುಮಾರ್ ಪುತ್ರಿ ದೆಹಲಿ ತಲುಪಿದ್ದು, ಬೆಂಗಳೂರಿಗೆ ಬಂದ ಬಳಿಕ ಅಂತ್ಯಕ್ರಿಯೆ ಮಾಡಲಾಗುವುದು, ಪಾರ್ಥಿವ ಶರೀರದ ಮೆರವಣಿಗೆ ಅಂತ್ಯಕ್ರಿಯೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ವೇಳೆಯಲ್ಲಿ ಕುಟುಂಬಸ್ಥರಿಗೆ ಮಾತ್ರ ಅವಕಾಶವಿರಲಿದ್ದು, ಸಾರ್ವಜನಿಕರಿಗೆ  ಅವಕಾಶ ಇರಲ್ಲ ಎಂದು ಸಿಎಂ ಹೇಳಿದರು.

ಅಂತ್ಯಕ್ರಿಯೆ ಸುಗಮವಾಗಿ ನಡೆಯಲು ಪೊಲೀಸ್ ಹಾಗೂ ಬಿಬಿಎಂಪಿ ಕ್ರಮ ವಹಿಸುತ್ತಿದ್ದಾರೆ.ಗೌರವದಿಂದ ಶಾಂತಿಯುತವಾಗಿ ಪುನೀತ್ ರಾಜ್ ಕುಮಾರ್ ಅವರನ್ನು ಬೀಳ್ಗೂಡಬೇಕಾಗಿದೆ. ಸಾರ್ವಜನಿಕರು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ  ಸಂಯಮದಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿಕೊಂಡರು.

ಈ ಮಧ್ಯೆ ಪುನೀತ್ ರಾಜ್ ಕುಮಾರ್ ಅವರಿಗೆ ಗಂಡು ಮಕ್ಕಳು ಇಲ್ಲದ ಕಾರಣ ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ವಿನಯ್ ಕುಮಾರ್ ಅವರು ಅಂತಿಮ ವಿಧಿ ವಿಧಾನ ಕಾರ್ಯ ನೆರವೇರಿಸಲು ಕುಟುಂಬಸ್ಥರು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com