ಪುನೀತ್ ರಾಜ್​ಕುಮಾರ್ ನಿಧನಕ್ಕೆ ಶೋಕ: ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಖ್ಯಾತ ನಟ ಪುನೀತ್ ರಾಜ್​ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿವೆ.
ಪುನೀತ್ ರಾಜ್​ಕುಮಾರ್
ಪುನೀತ್ ರಾಜ್​ಕುಮಾರ್

ಬೆಂಗಳೂರು: ಖ್ಯಾತ ನಟ ಪುನೀತ್ ರಾಜ್​ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿವೆ.

ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಪ್ರಕಟಣೆ ಹೊರಡಿಸಿದೆ. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಪುನೀತ್ ರಾಜ್‌ಕುಮಾರ್ ಅಗಲಿಕ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ‌ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com