ಇಂದು ಸಂಜೆ 6 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ
ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದ್ದು, ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
Published: 30th October 2021 10:43 AM | Last Updated: 30th October 2021 12:38 PM | A+A A-

ಪುನೀತ್ ರಾಜ್ ಕುಮಾರ್
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದ್ದು, ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಚಂದನವನದ ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 6-6.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆಂದು ಹೇಳಲಾಗುತ್ತಿದೆ.
ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬರದಂತೆ ಮನವಿ ಮಾಡಿದ್ದಾರೆ.
ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
ಪುನೀತ್ ಅಂತ್ಯಕ್ರಿಯೆ ಕುರಿತು ಮಾಹಿತಿ ನೀಡಿರುವ ಅವರು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಪುನೀತ್ ರಾಜ್ ಕುಮಾರ್ ಅವರ ಕುಟುಂಬಸ್ಥರ ನಿರ್ಧಾರದ ಮೇರೆಗೆ ಮುಂದಿನ ಹಂತದ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಅಂತ್ಯಕ್ರಿಯೆ ಯಾವಾಗ ನಡೆಸುವುದು ಎಂಬುದನ್ನು ಪುನೀತ್ ಅವರ ಕುಟುಂಬಸ್ಥರೇ ನಿರ್ಧರಿಸುತ್ತಾರೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ರಾಕ್‌ಲೈನ್ ವೆಂಕಟೇಶ್ ಅವರು ಮಾತನಾಡಿ, ಸಂಜೆ 6 - 6.30ಕ್ಕೆ ಅಂತ್ಯ ಸಂಸ್ಕಾರ ನೆರವೇರುತ್ತೆ. ಮುಖ್ಯಮಂತ್ರಿಗಳ ಆದೇಶದಂತೆ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಭಿಮಾನಿಗಳು ಸ್ಪಂದಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
Father - mother and the son !
— TNIE Karnataka (@XpressBengaluru) October 30, 2021
Arrangements made at Kanteerava studio premises to bury actor Puneeth Rajkumar's mortal who passed away on Friday. His body will be buried next to Rajkumar and Parvathamma Rajkumar's Samaadhi .
Video by @shrirambn @NewIndianXpress @santwana99 pic.twitter.com/L0lVdhBZxt
ಸಚಿವರಿಂದ ಸ್ಥಳ ಪರಿಶೀಲನೆ
ಡಾ.ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲೇ ನಡೆಯುತ್ತಿರುವ ಸಿದ್ಧತೆಯನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಬೆಳಿಗ್ಗೆ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಬಿಬಿಎಂಪಿ ಅಧಿಕಾರಿಗಳು, ಇಂಜಿನಿಯರ್ ಗಳು ಉಪಸ್ಥಿತರಿದ್ದರು.
ರಾಜ್ಯಪಾಲರಿಂದ ಪುನೀತ್ ಅಂತಿಮ ದರ್ಶನ
ಈ ನಡುವೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಕಂಠೀರವ ಸ್ಟೇಡಿಯಂಗೆ ಭೇಟಿ ನೀಡಿದ್ದು, ಪುನೀತ್ ಅವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
Bengaluru | Karnataka Governor Thaawarchand Gehlot
— ANI (@ANI) October 30, 2021
and CM Basavaraj Bommai pay respects to late actor #PuneethRajkumar pic.twitter.com/lHK0zFBpaB
ಪುನೀತ್ ಅವರ ಪಾದಗಳಿಗೆ ನಮ್ಮ ನಮನ ಸಲ್ಲಿಸಿದ್ದೇನೆ. ಚಿತ್ರರಂಗವಷ್ಟೇ ಅಲ್ಲದೆ ಪುನೀತ್ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಪುನೀತ್ ರಾಜ್ ಕುಮಾರ್ ಜೀ..ಅವರ ಅಕಾಲಿಕ ನೋವು ತಂದಿದೆ.. ಚಿಕ್ಕವಯಸ್ಸಾಗಿದ್ರು ಸಾಧನೆ ಅಗಾಧ ಎಂದು ಹೇಳಿದ್ದಾರೆ.