ಸಿಂದಗಿ, ಹಾನಗಲ್ ಉಪಚುನಾವಣೆ ಮತದಾನ ಆರಂಭ: ಬೆಳಿಗ್ಗೆ 7- ಸಂಜೆ 5ರವರೆಗೆ ಮತದಾನ, ನ.2ಕ್ಕೆ ಫಲಿತಾಂಶ

ರಾಜ್ಯದ ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ.

ಸಿ.ಎಂ. ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಮತ್ತು ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರಗೆ ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ನ.2 ರಂದು ಮಣಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಕಾಂಗ್ರೆಸ್‌ನಿಂದ ಅಶೋಕ್. ಎಂ. ಮನಗೂಳಿ, ಜೆಡಿಎಸ್‌ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಒಟ್ಟು 2,34,584 ಮತದಾರರು ಮತ ಚಲಾಯಿಸಲಿದ್ದು, ಈ ಪೈಕಿ 1,20,844 ಪುರುಷರು, 1,13,561 ಮಹಿಳೆಯರು ಹಾಗೂ 32 ಇತರೆ ಮತದಾರರು ಮತ ಚಲಾಯಿಸಲಿದ್ದಾರೆ.

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನರ, ಕಾಂಗ್ರೆಸ್‌ನಿಂದ ಶ್ರೀನಿವಾಸ ಮಾನೆ, ಜೆಡಿಎಸ್‌ನಿಂದ ನಿಯಾಜ್ ಶೇಖ್ ಸೇರಿದಂತೆ 13 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಒಟ್ಟು 2,04,481 ಮತದಾರರು ಮತ ಚಲಾಯಿಸಲಿದ್ದು, ಈ ಪೈಕಿ 1,05,525 ಪುರುಷರು, 98,953 ಮಹಿಳೆಯರು ಹಾಗೂ 3 ಇತರೆ ಮತದಾರರು ಮತ ಚಲಾಯಿಸಲಿದ್ದಾರೆ.

ಸಿಂಧಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಜುಲೈ 26ರಂದು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು. ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಎದುರಿಸುತ್ತಿರುವ ಮೊದಲನೇ ಚುನಾವಣೆ ಇದಾಗಿದೆ.

ಹಾನಗಲ್ ಕ್ಷೇತ್ರ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರದ ಪಕ್ಕದ ಕ್ಷೇತ್ರವಾಗಿದ್ದು, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com