ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ: ಪೊಲೀಸರ ಕಾರ್ಯನಿರ್ವಹಣೆ ಪ್ರಶಂಸಿಸಿದ ಕಮಲ್ ಪಂತ್
ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಹಗಲು-ರಾತ್ರಿ ಎನ್ನದೆ ಪೊಲೀಸರು ಕರ್ತವ್ಯನಿರ್ವಹಿಸಿದ್ದು, ಪೊಲೀಸರ ಕಾರ್ಯನಿರ್ವಹಣೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Published: 31st October 2021 09:59 AM | Last Updated: 31st October 2021 09:59 AM | A+A A-

ಕಮಲ್ ಪಂತ್
ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಹಗಲು-ರಾತ್ರಿ ಎನ್ನದೆ ಪೊಲೀಸರು ಕರ್ತವ್ಯನಿರ್ವಹಿಸಿದ್ದು, ಪೊಲೀಸರ ಕಾರ್ಯನಿರ್ವಹಣೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದಿ.ನಟ ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ ಕಾರ್ಯ ಪೂರ್ಣವಾಗುತ್ತಿದ್ದಂತೆ ಸ್ಟುಡಿಯೋ ಹೊರಭಾಗಕ್ಕೆ ಬಂದ ಕಮಲ್ ಪಂತ್ ಅವರು, ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿ, ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಗೆ ಹಸ್ತಲಾಘವ ನೀಡುತ್ತಾ, ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಟ ಪುನೀತ್ ಅಂತಿಮ ದರ್ಶನ, ಅಂತಿಮ ಯಾತ್ರೆ, ಅಂತ್ಯಕ್ರಿಯೆಯ ವೇಳೆ ಸಾವಿರಾರು ಸಂಖ್ಯೆಯಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಸ್ಥಳಕ್ಕೆ ಆಗಮಿಸಿದರೂ, ಯಾವುದೇ ರೀತಿಯ ಅಹಿತಕರ ಘಟನೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸುಗಮವಾಗಿ ಅಂತ್ಯಸಂಸ್ಕಾರ ನಡೆಸಲು ಭದ್ರತಾ ಸಿಬ್ಬಂದಿ ಅವಕಾಶ ಕಲ್ಪಿಸಿದ್ದರು.