ಭೂತಾಯಿ ಮಡಿಲು ಸೇರಿದ ಪುನೀತ್: 5ನೇ ದಿನ ಹಾಲು-ತುಪ್ಪ ನೆರವೇರಿಸಲು ನಿರ್ಧಾರ, ಕಂಠೀರವ ಸ್ಟುಡಿಯೋ ಸುತ್ತಮುತ್ತ ಸೆಕ್ಷನ್ 144 ಜಾರಿ

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದ್ದು, 5ನೇ ದಿನ ಹಾಲು-ತುಪ್ಪ ಬಿಡುವ ಕಾರ್ಯವನ್ನು ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಿದ ಸಿಎಂ ಬೊಮ್ಮಾಯಿ
ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದ್ದು, 5ನೇ ದಿನ ಹಾಲು-ತುಪ್ಪ ಬಿಡುವ ಕಾರ್ಯವನ್ನು ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್​ ಹೇಳಿಕೆ ನೀಡಿದ್ದಾರೆ. ಕಂಠೀರವ ಸ್ಟುಡಿಯೋ ಒಳಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್‌ಕುಮಾರ್ ಸಮಾಧಿ ಪಕ್ಕದಲ್ಲಿಯೇ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆದಿದ್ದು, ಕುಟುಂಬಸ್ಥರು, ಚಿತ್ರರಂಗದ ಅನೇಕ ಗಣ್ಯರು ಅಗಲಿದ ನಟನಿಗೆ ಅಂತಿಮ ನಮನ ಸಲ್ಲಿಸಿದರು.

ಪುನೀತ್‌ರಾಜ್‌ಕುಮಾರ್‌ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್‌ಕುಮಾರ್ ಪುತ್ರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿವಿಧ ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪುನೀತ್‌ರಾಜ್‌ಕುಮಾರ್ ಅಂತಿಮ ದರ್ಶನ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com