ಕೋವಿಡ್ ನಿಯಮ ಉಲ್ಲಂಘನೆ: ಓವೈಸಿ ಸೇರಿ 300 ಜನರ ವಿರುದ್ಧ ಪ್ರಕರಣ ದಾಖಲು

ಕೋವಿಡ್-19 ನಿಯಮ ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ ಆರೋಪದಡಿ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಸೇರಿ 300ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ಬೆಳಗಾವಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ

ಬೆಳಗಾವಿ: ಕೋವಿಡ್-19 ನಿಯಮ ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ ಆರೋಪದಡಿ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಸೇರಿ 300ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ಬೆಳಗಾವಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಸೆ.3ರಂದು ನಡೆಯುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರವಾಗಿ ಸೋಮವಾರ ಸಂಸದ ಅಸಾದುದ್ದೀನ್‌ ಓವೈಸಿ ಬೆಳಗಾವಿಯ ದರ್ಬಾರ್‌ ಗಲ್ಲಿಯಲ್ಲಿ ಚುನಾವಣಾ ರಾರ‍ಯಲಿ ನಡೆಸಿದ್ದರು. 

ಈ ವೇಳೆ ಓವೈಸಿ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಗುಂಪುಗುಂಪಾಗಿ ಸೇರಿ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದ್ದರು.

ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಓವೈಸಿ ವಿರುದ್ಧ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com