ರಾಮನಗರ: ಮಾಗಡಿ ತಾಲೂಕು ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಲೋಕಾರ್ಪಣೆ

ಮಾಗಡಿ ತಾಲೂಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಂಗಳವಾರ ಲೋಕಾರ್ಪಣೆಗೊಳಿಸಿದರು.
ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆಗೊಳಿಸಿದ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆಗೊಳಿಸಿದ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಂಗಳವಾರ ಲೋಕಾರ್ಪಣೆಗೊಳಿಸಿದರು. ಶಾಸಕ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಗಡಿ ತಾಲೂಕ್ ಆಸ್ಪತ್ರೆ ಆವರಣದಲ್ಲಿ ಕೆಆರ್ ಐಡಿಎಲ್ ನ ಸಿಎಸ್ ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ಆಮ್ಲಜನಕ ಉತ್ಪಾದನಾ ಘಟಕ ನಿಮಿಷಕ್ಕೆ 580 ಲೀಟರ್ ಆಮ್ಲಜನಕ ಉತ್ಪಾದಿಸಬಲ್ಲದಾಗಿದೆ. ಇದರಿಂದಾಗಿ ಆಸ್ಪತ್ರೆಯು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದಂತಾಗಿದೆ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ನಂತರ ತಾಲೂಕಿನ ಕರಲಮಂಗಲಕ್ಕೆ ಭೇಟಿ ನೀಡಿ, ಸಂಜೀವಿನಿ ಒಕ್ಕೂಟದ ಮಹಿಳಾ ಸ್ವ-ಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಣೆ ಮಾಡುತ್ತಿರುವ 'ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣ ಕೇಂದ್ರ ವನ್ನು ಸಚಿವರು ವೀಕ್ಷಿಸಿದರು. ಮಹಿಳೆಯರು ಈ ಯಂತ್ರಗಳ ಮೂಲಕ ಮಾಸಿಕ ಅಂದಾಜು 60,000 ರೂಪಾಯಿ ದುಡಿಯುತ್ತಿದ್ದು, ಅವರೊಂದಿಗೆ  ಸಂವಾದ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com