ಬೆಂಗಳೂರು: ಕುಖ್ಯಾತ ಡ್ರಗ್ಸ್ ಪೆಡ್ಲರ್ ಮೆಸ್ಸಿ ಬಂಧನ

ಸ್ಯಾಂಡಲ್‍ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ್ಟ್ ವಾಂಟೆಡ್‌ ಡ್ರಗ್ಸ್ ಪೆಡ್ಲರ್ ನನ್ನು ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ್ಟ್ ವಾಂಟೆಡ್‌ ಡ್ರಗ್ಸ್ ಪೆಡ್ಲರ್ ನನ್ನು ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಶರೀಫ್ ಹಸನ್ ಮಸೂರಿ ಅಲಿಯಾಸ್ ಮೆಸ್ಸಿ ಬಂಧಿತ ಕುಖ್ಯಾತ ಡ್ರಗ್ಸ್ ಪೆಡ್ಲರ್.

ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಈ ಕುರಿತು ಪ್ರತಿಕ್ರಿಯಿಸಿ, ಕಳೆದ ಒಂದು ವರ್ಷದಿಂದ ತಲೆನರೆಸಿಕೊಂಡಿದ್ದ ಭಟ್ಕಳ ಮೂಲದ ಮೆಸ್ಸಿಯನ್ನು ಆಗಷ್ಟ್ 30ರ ಸಂಜೆ ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದರು.

ಬಂಧಿತ ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯದ ಅನುಮತಿ ಪಡೆದು, 14 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಪ್ರಮುಖ ಆರೋಪಿಯಾಗಿದ್ದ ಮೆಸ್ಸಿ, ಡ್ರಗ್ಸ್​ ಜಾಲದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ವಿರೇನ್ ಖನ್ನಾ ಸೇರಿ ಬೆಂಗಳೂರಿನ ಬಹುಪಾಲು ಸೆಲೆಬ್ರಿಟಿ ಡ್ರಗ್ಸ್ ಪಾರ್ಟಿಯಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎಂಬ ಆರೋಪವಿದೆ. ಅಲ್ಲದೆ ಡ್ರಗ್ ಕೇಸ್ ಆರೋಪಿಗಳ ಜೊತೆ ಪಾರ್ಟಿ ಮಾಡಿರುವ ಫೋಟೋಗಳು ಸಹ ಪೊಲೀಸರಿಗೆ ಲಭ್ಯವಾಗಿವೆ.

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರ ಬಂದಿರುವ ಸ್ಯಾಂಡಲ್ ವುಡ್ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇತ್ತೀಚೆಗೆ ಬಹಿರಂಗಗೊಂಡಿರುವ ಎಫ್‍ಎಸ್‍ಎಲ್ ವರದಿಯಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವನೆ ಮಾಡಿರುವುದು ಖಚಿತಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com