ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ಬಿ ರಿಪೋರ್ಟ್'ಗೆ ಭಾಸ್ಕರ್ ರಾವ್ ತಕರಾರು ಅರ್ಜಿ

ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದ್ದ ಐಪಿಎಸ್ ಅಧಿಕಾರಿಯ ಫೋನ್ ಕದ್ದಾಲಿಕೆ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಬಿ-ರಿಪೋರ್ಟ್'ಗೆ ಐಪಿಎಸ್ ಅಧಿಕಾರಿ ಎಂ.ಭಾಸ್ಕರ್ ರಾವ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತಕರಾರು ಅರ್ಜಿ ಹಾಕಿದ್ದಾರೆ. 
ಭಾಸ್ಕರ್ ರಾವ್
ಭಾಸ್ಕರ್ ರಾವ್

ಬೆಂಗಳೂರು: ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದ್ದ ಐಪಿಎಸ್ ಅಧಿಕಾರಿಯ ಫೋನ್ ಕದ್ದಾಲಿಕೆ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಬಿ-ರಿಪೋರ್ಟ್'ಗೆ ಐಪಿಎಸ್ ಅಧಿಕಾರಿ ಎಂ.ಭಾಸ್ಕರ್ ರಾವ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತಕರಾರು ಅರ್ಜಿ ಹಾಕಿದ್ದಾರೆ. 

ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಾಕಷ್ಟು ಪುರಾವೆ ಮತ್ತು ಸಾಕ್ಷ್ಯಾಧಾರಗಳು ಲಭ್ಯವಿದೆ. ಆದರೂ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮತ್ತು ಪತ್ರಕರ್ತೆ ಹೆಸರನ್ನು ತನಿಖಾ ವರದಿಯಲ್ಲಿ ಸೇರಿಸಿಲ್ಲ. ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯಕ್ಕೆ ಸಿಬಿಐ ಬಿ-ರಿಪೋರ್ಟ್ ಸಲ್ಲಿಕೆ ಸರಿಯಲ್ಲ. ಈ ಬಗ್ಗೆ ಸರಿಯಾದ ತನಿಖೆ ನಡೆಸಬೇಕು ಎಂದು ಭಾಸ್ಕರ್ ರಾವ್ ತಕರಾರು ಅರ್ಜಿಯಲ್ಲಿ ತಿಳಿಸಿದ್ದಾರೆ. 

ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ತನಿಖೆಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಕಂಡು ಬಂದ ಕಾರಣ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮತ್ತು ಪತ್ರಕರ್ತೆಗೆ ಕ್ಲಿನ್ ಚಿಟ್ ನೀಡಲಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿ ಭಾಸ್ಕರ್ ರಾವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com