ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳ ಪ್ರಸ್ತಾವಕ್ಕೆ ವಿದ್ಯಾರ್ಥಿಗಳ ಅಸಮಾಧಾನ
ಈ ವರ್ಷದಿಂದ ಶೇ. 30 ರಷ್ಟು ಶುಲ್ಕವನ್ನು ಹೆಚ್ಚಿಸಲು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಬಯಸಿರುವುದಾಗಿ ವರದಿಯಾಗಿರುವಂತೆಯೇ, ಉನ್ನತ ಶಿಕ್ಷಣ ಇಲಾಖೆ ಇನ್ನೂ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದ್ದು, ಅಂತಿಮಗೊಳಿಸಬೇಕಾಗಿದೆ. ಆದರೆ, ಇದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
Published: 01st September 2021 07:52 PM | Last Updated: 01st September 2021 08:19 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಈ ವರ್ಷದಿಂದ ಶೇ. 30 ರಷ್ಟು ಶುಲ್ಕವನ್ನು ಹೆಚ್ಚಿಸಲು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಬಯಸಿರುವುದಾಗಿ ವರದಿಯಾಗಿರುವಂತೆಯೇ, ಉನ್ನತ ಶಿಕ್ಷಣ ಇಲಾಖೆ ಇನ್ನೂ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದ್ದು, ಅಂತಿಮಗೊಳಿಸಬೇಕಾಗಿದೆ. ಆದರೆ, ಇದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕವನ್ನು ಹೆಚ್ಚಿಸಲು ಅನುಮತಿಸುವಂತೆ ಸ್ವಲ್ಪ ಸಮಯದಿಂದ ಬೇಡಿಕೆ ಸಲ್ಲಿಸುತ್ತಿರುವುದಾಗಿ ಉನ್ನತ ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
2019ರಲ್ಲಿ ಕೊನೆಯದಾಗಿ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಆದಾಗ್ಯೂ, ಶುಲ್ಕ ಹೆಚ್ಚಳಕ್ಕೆ ಹಲವು ತಿಂಗಳುಗಳ ಹಿಂದೆಯೇ ಬೇಡಿಕೆ ಇಡಲಾಗಿದೆ ಆದರೆ, ಇನ್ನೂ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ, ಸೆಪ್ಟೆಂಬರ್ ಎರಡನೇ ವಾರದಲ್ಲಿ ಸಭೆಯನ್ನು ಯೋಜಿಸಲಾಗಿದ್ದು, ಒಮ್ಮತದ ಆಧಾರದ ಮೇಲೆ ಶುಲ್ಕ ಹೆಚ್ಚಳವನ್ನು ನಿರ್ಧರಿಸಲಾಗುವುದು ಎಂದು ಮೂಲಗಳು ಹೇಳಿವೆ.
ಈ ಮಧ್ಯೆ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳ ಪ್ರಸ್ತಾವಕ್ಕೆ ಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಷನನ್ಸ್ ವಿರೋಧ ವ್ಯಕ್ತಪಡಿಸಿದೆ.ಖಾಸಗಿ ಮ್ಯಾನೇಜ್ ಮೆಂಟ್ ಲಾಬಿಗೆ ಮಣಿದು ಸರ್ಕಾರ ಎಂಜಿನಿಯರಿಂಗ್ ಕೋರ್ಸ್ ಗೆ ಶೇ. 10 ರಷ್ಟು ಶುಲ್ಕ ಹೆಚ್ಚಿಸಲು ಚಿಂತಿಸುತ್ತಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.