ನಮ್ಮ ಮೆಟ್ರೋ ರೈಲು ಮಾರ್ಗ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಡನೆ ಏಕೆ?: ಸಚಿವ ಸುನೀಲ್ ಕುಮಾರ್

ನಮ್ಮ ಮೆಟ್ರೋ ರೈಲು ಮಾರ್ಗ ಉದ್ಘಾಟನೆ ಸಂದರ್ಭದಲ್ಲಿ ಕನ್ನಡವನ್ನು ಕಡೆಗಣನೆ ಮಾಡಿರುವುದು ಗಂಭೀರ ಸ್ವರೂಪದ ಲೋಪ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
ಸುನೀಲ್ ಕುಮಾರ್
ಸುನೀಲ್ ಕುಮಾರ್

ಬೆಂಗಳೂರು: ನಮ್ಮ ಮೆಟ್ರೋ ರೈಲು ಮಾರ್ಗ ಉದ್ಘಾಟನೆ ಸಂದರ್ಭದಲ್ಲಿ ಕನ್ನಡವನ್ನು ಕಡೆಗಣನೆ ಮಾಡಿರುವುದು ಗಂಭೀರ ಸ್ವರೂಪದ ಲೋಪ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತಾಗಿ ಮೆಟ್ರೋ ಎಂಡಿ ಅಂಜುಮ್ ಪರ್ವೇಜ್ ಅವರಿಗೆ ಸುನಿಲ್ ಕುಮಾರ್ ಅವರು ಪತ್ರ ಬರೆದಿದ್ದಾರೆ. ದಿನಾಂಕ 29,08.2021 ರಂದು ನಾಯಂಡಹಳ್ಳಿ ಕೆಂಗೇರಿ ನಡುವಿನ ಮೆಟ್ರೋ ರೈಲು ಸಂಚಾರದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಭಾಷೆಯ ಕಡೆಗಣನೆಯನ್ನು ಗಮನಿಸಲಾಗಿರುತ್ತದೆ.

ಸಮಾರಂಭದ ಮುಖ್ಯ ವೇದಿಕೆಯ ಫಲಕಗಳಲ್ಲಿ ಹಾಗೂ ಹಿಂಬದಿಯ ಪರದೆಯಲ್ಲಿ ಕನ್ನಡ ಭಾಷೆಯನ್ನು ಬಳಸಿರಲಿಲ್ಲ ಎಂಬುದು ನಿಜಕ್ಕೂ ಗಂಭೀರವಾದ ಸಂಗತಿ. ರಾಜ್ಯದ ರಾಜಧಾನಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಜ್ಯದ ಅಧಿಕೃತ ಆಡಳಿತ ಭಾಷೆಯನ್ನು ಕಡೆಗಣಿಸಿದ್ದು ಗಂಭೀರವಾದ ಲೋಪವಾಗಿದೆ.

ಈಗಾಗಲೇ ಆಡಳಿತ ಭಾಷೆಯಾಗಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಇಂತಹ ಕರ್ತವ್ಯ ಲೋಪವಾಗಿರುವುದು ನಿಜಕ್ಕೂ ದುರದೃಷ್ಟಕರ. ಈ ಬಗ್ಗೆ ಗಮನ ಹರಿಸಬೇಕಾದದ್ದು ನಿಮ್ಮ ಹಾಗೂ ನಿಮ್ಮ ಅಧೀನದಲ್ಲಿರುವ ಅಧಿಕಾರಿಗಳ ಕರ್ತವ್ಯವಾಗಿದೆ.

ಆದರೂ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿರುವುದನ್ನು ಸಹಿಸಲಾಗದು. ಭಾಷೆ ಒಂದು ಭಾವನಾತ್ಮಕ ವಿಚಾರ, ಅದರಲ್ಲಿಯೂ ಆಡಳಿತ ಭಾಷೆಯ ಬಗ್ಗೆ, ತೋರಿದ ಆದರೆ ರಾಜ್ಯದ ಜನತೆಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳಸಬೇಕಾದ ಸರ್ಕಾರದ ಇಲಾಖೆಗಳು ಈ ರೀತಿಯ ಲೋಪವೆಸಗವುದು, ಗಂಭೀರ ಕರ್ತವ್ಯಲೋಪವೆಂದು ಪರಿಗಣಿಸಲ್ಪಡುತ್ತದೆ. ಅದರಿಂದ ಇದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ತಾವು ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಇದಕ್ಕೆ ಸೂಕ್ತ ವಿವರಣೆ ನೀಡಬೇಕೆಂದು ಎಂದು ಪತ್ರದಲ್ಲಿ ಸೂಚನೆ ನೀಡಲಾಗಿದೆ.‌

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com