ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 319 ಸೇರಿ ಇಂದು 1,220 ಪ್ರಕರಣ ಪತ್ತೆ; 19 ಸಾವು!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 1,220 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,53,064ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 1,220 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,53,064ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 19 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,380ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಬೆಂಗಳೂರಿನಲ್ಲಿ ಇಂದು 319 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,38,834ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,175 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,97,254ಕ್ಕೆ ಏರಿಕೆಯಾಗಿದೆ. ಇನ್ನು18,404 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,79,227 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,220 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.68ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com