ಬೆಲೆ ಏರಿಕೆ: ಸೆ.5ಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಸೆ.5ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲಿದ್ದು, ಅಡುಗೆ ಅನಿಲ, ತೈಲ ಬೆಲೆ ಏರಿಕೆ ಕುರಿತು ಮಾತುಕತೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ. 
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸೆ.5ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲಿದ್ದು, ಅಡುಗೆ ಅನಿಲ, ತೈಲ ಬೆಲೆ ಏರಿಕೆ ಕುರಿತು ಮಾತುಕತೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿಯವರು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. 

ಅಡುಗೆ ಅನಿಲ, ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿರ್ಧಾರವಾಗುತ್ತದೆ. ಕಾಂಗ್ರೆಸ್‌ನವರು ಈ ಹಿಂದೆ ಏನು ಮಾಡಿದ್ದಾರೆ. ಆಯಿಲ್‌ ಬಾಂಡ್‌ ವಿಚಾರ ಏನಾಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಯಾವುದೇ ಚರ್ಚೆಗಳು ಇನ್ನೂ ಆಗಿಲ್ಲ. ಈ ಸಂದರ್ಭದಲ್ಲಿ ವರಿಷ್ಠರ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲ್ಲ ಎಂದು ತಿಳಿಸಿದ್ದಾರೆ. 

ಬಳಿಕ ಕೋವಿಡ್ ನಿರ್ವಹಣೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಸಭಾವ್ಯ ಕೊರೊನಾ ೩ನೇ ಅಲೆಯನ್ನು ತಡೆಯಲು ಎಲ್ಲ ರೀತಿಯ ಕ್ರಮಕೈಗೊಳ್ಳಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ವಾರಾಂತ್ಯ ಕರ್ಫ್ಯೂವನ್ನು ರದ್ದು ಮಾಡುವ ಸಂಬಂಧ ತಜ್ಞರ ಜತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದರು.

ಕೇರಳ ಗಡಿಯಿಂದ ರಾಜ್ಯಕ್ಕೆ ನಕಲಿ ಕೋವಿಡ್‌ ನೆಗೆಟಿವ್‌ ರಿಪೋರ್ಟ್ ತೆಗೆದುಕೊಂಡು ಬರುವರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಪಾಸಣೆ ಮಾಡಿ, ಅಂತವರು ವಿರುದ್ಧ ಕ್ರಮ‌ ಜರುಗಿಸಲು ಸೂಚಿಸಿದ್ದೇನೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರಾಥಮಿಕ ಶಾಲೆ ಆರಂಭ ವಿಚಾರವಾಗಿ ಮಾತನಾಡಿ, ಆ ಕುರಿತು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುವೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com