ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಕಲ ಸಿದ್ಧತೆ 

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಶುಕ್ರವಾರ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 07-00 ಗಂಟೆಯಿಂದ ಸಾಯಂಕಾಲ 06-00 ಗಂಟೆಯವರೆಗೆ ಮತದಾನ ಜರುಗಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಶುಕ್ರವಾರ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 07-00 ಗಂಟೆಯಿಂದ ಸಾಯಂಕಾಲ 06-00 ಗಂಟೆಯವರೆಗೆ ಮತದಾನ ಜರುಗಲಿದೆ.

ಮಹಾನಗರ ಪಾಲಿಕೆಯ 82 ವಾರ್ಡ್‍ಗಳಲ್ಲಿ 4,06,280 ಪುರುಷ ಹಾಗೂ 4,11,092 ಮಹಿಳಾ ಮತ್ತು 86 ಇತರೆ ಸೇರಿ ಒಟ್ಟು 8,17,458 ಮತದಾರರು ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 82 ವಾರ್ಡ್‍ಗಳಲ್ಲಿನ ಮತದಾರರು ತಮ್ಮ ಹಕ್ಕು ಚಲಾಯಿಸಲು ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಪಾಲಿಕೆಯ ಚುನಾವಣೆಗೆ  ಮತಗಟ್ಟೆ ಸಿಬ್ಬಂದಿ ಹಾಗೂ ಮತಯಂತ್ರಗಳ ಸಾಗಾಣಿಕೆಗಾಗಿ ವಿವಿಧ ರೀತಿಯ 155 ವಾಹನಗಳನ್ನು ಬಳಸಲಾಗುತ್ತಿದೆ. ಇದರಲ್ಲಿ 67 ಬಸ್, 24 ಮಿನಿಬಸ್, 41 ಮ್ಯಾಕ್ಸಿಕ್ಯಾಬ್ ಮತ್ತು 23 ಜೀಪ್ ಬಳಸಿಕೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com