ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ: ನಿರಾಣಿ

ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ  ದೊರಕಲಿದೆ ಎಂದು  ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಅಧಿಕಾರಿಗಳೊಂದಿಗೆ ಪರಿಶೀಲಿಸುತ್ತಿರುವ ಸಚಿವ ಮುರುಗೇಶ್ ನಿರಾಣಿ
ಅಧಿಕಾರಿಗಳೊಂದಿಗೆ ಪರಿಶೀಲಿಸುತ್ತಿರುವ ಸಚಿವ ಮುರುಗೇಶ್ ನಿರಾಣಿ

ತುಮಕೂರು: ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ  ದೊರಕಲಿದೆ ಎಂದು  ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್  ನಿರಾಣಿ ಹೇಳಿದ್ದಾರೆ.

ಗುರುವಾರ ತುಮಕೂರಿನ ವಸಂತನರಸಪುರದ ಕೈಗಾರಿಕಾ ಪ್ರದೇಶದಲ್ಲಿರುವ ಪುಡ್ ಪಾಕ್೯ಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಗುವುದು, 15 ದಿನಗದೊಳಗೆ 2022ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ದೇಶ- ವಿದೇಶಗಳಿಂದ ಕೈಗಾರಿಕೆ ಸ್ಥಾಪನೆ ಮಾಡಲು ಉದ್ಯಮಿಗಳಿಗೆ ಆಹ್ವಾನ ನೀಡಲಾಗುವುದು, ಕಳೆದ ಬಾರಿಯಂತೆ ಈ ಬಾರಿಯೂ ಹೂಡಿಕೆದಾರರ ಸಮಾವೇಶವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು, ಈ ಬಾರಿ ಹೊಸದಾಗಿ 5 ಲಕ್ಷ ಉದ್ಯೋಗಗಳನ್ನು ನೀಡುವ ಗುರಿ ಇದೆ ಎಂದರು.

ಸುಮಾರು 105 ಎಕರೆ ಪ್ರದೇಶದ ಪುಡ್ ಪಾರ್ಕ್  ನಲ್ಲಿ 1000 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. ದೇಶ- ವಿದೇಶಗಳಿಂದ ಅನೇಕ ಕಂಪನಿಗಳು ಬರಲಿವೆ. ಮುಂದಿನ ದಿನಗಳಲ್ಲಿ ಇದರಿಂದ ಕೈಗಾರಿಕಾ ಬೆಳವಣಿಗೆಯಾಗಲಿದೆ ಎಂದು ಸಚಿವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com