ರಸ್ತೆಗುಂಡಿ ಮುಚ್ಚಲು ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೂಚನೆ

ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪಣತೊಟ್ಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ದಿನನಿತ್ಯವೂ ಗುಂಡಿ ಮುಚ್ಚುವ ಪ್ರಕ್ರಿಯೆಯಲ್ಲಿ ತೊಡಗುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪಣತೊಟ್ಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ದಿನನಿತ್ಯವೂ ಗುಂಡಿ ಮುಚ್ಚುವ ಪ್ರಕ್ರಿಯೆಯಲ್ಲಿ ತೊಡಗುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ಮಳೆಗಾಲದ ಹಿನ್ನೆಲೆಯಲ್ಲಿ ಅಲ್ಲಲ್ಲಿ ರಸ್ತೆಗುಂಡಿಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ, ದಿನನಿತ್ಯವೂ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಯಾವುದೇ ರಸ್ತೆಯಲ್ಲಿ ಗುಂಡಿ ಕಂಡುಬಂದರೆ ಒಂದರೆಡು ದಿನಗಳಲ್ಲಿಯೇ ಮುಚ್ಚಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೆ, ಒಂದು ಸಾವಿರ ಕೋಟಿ ರೂ.ವೆಚ್ಚದಲ್ಲಿ ರಸ್ತೆ ಪುನರ್ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ರಸ್ತೆಗಳು ಸುಗಮ ಸಂಚಾರಕ್ಕೆ ಸಿದ್ಧಗೊಳ್ಳಲಿವೆ ಎಂದು ತಿಳಿಸಿದರು.

ಇನ್ನೂ ಗುಂಡಿ ಮುಚ್ಚಲು ನೀಡಿರುವ ಅಂತಿಮ ಗಡುವಿನ ಬಗ್ಗೆ ಮಾತನಾಡಿದ ಅವರು ಇದು ಕೇವಲ ಒಂದು ದಿನದ ಪ್ರಕ್ರಿಯೆಯಲ್ಲ, ಅದಕ್ಕೆ ಅಂತಿಮ ಗಡುವನ್ನು ನಿರ್ಧರಿಸಲಾಗದು, ಮಳೆಯಿಂದಾಗಿ ಹೊಸದಾಗಿ ಮುಚ್ಚಿದ ಗುಂಡಿಗಳು ಕೂಡ ಮತ್ತೆ ಹಾಳಾಗುತ್ತಿವೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ರಸ್ತೆಗುಂಡಿಗಳನ್ನು ನೋಡಿ, ಅವುಗಳನ್ನು ಶೀಘ್ರವೇ ಮುಚ್ಚಬೇಕೆಂದು ಸೂಚಿಸಿದ್ದರು. ರಸ್ತೆಗಳ ಗುಂಡಿಗಳನ್ನು ಮುಚ್ಚಲು ಒಂದು ತಿಂಗಳ ಸಮಯಾವಕಾಶ ಕೇಳಿದ್ದಾರೆಂದು ಆಯುಕ್ತರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com