ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ

ಜನವರಿ 21 ''ದಾಸೋಹ ದಿನ'' ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ

ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ''ದಾಸೋಹ ದಿನ'' ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ. 

ಬೆಂಗಳೂರು: ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ''ದಾಸೋಹ ದಿನ'' ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ. 

ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಲಿಂಗೈಕ್ಯರಾದ ಶಿವಕುಮಾರ ಸ್ವಾಮೀಜಿ ಅವರ ಅಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ ಜನವರಿ 21 ರಂದು ಸರ್ಕಾರದ ವತಿಯಿಂದ ದಾಸೋಹ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ.

ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ರೂಪುರೇಷೆ ತಯಾರಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಧನ್ಯವಾದ ಸಲ್ಲಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com