ಈ ಬಾರಿಯೂ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧಾರ: ಮುಖ್ಯಮಂತ್ರಿ ಬೊಮ್ಮಾಯಿ

ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಸರಳ ದಸರಾ ಆಚರಣೆಗೆ ಸರ್ಕಾರ ತೀರ್ಮಾನಿಸಿದೆ. ಅಕ್ಟೋಬರ್ ನಲ್ಲಿ ಕೋವಿಡ್ ಮೂರನೇ ಅಲೆ ರಾಜ್ಯಕ್ಕೆ ಅಪ್ಪಳಿಸುತ್ತಿರುವುದರಿಂದ ಆರೋಗ್ಯ ತಾಂತ್ರಿಕ ತಜ್ಞರ ಸಲಹೆ ಮೇರೆಗೆ ಸರಳ ದಸರಾವನ್ನು ಈ ಬಾರಿಯೂ ಆಚರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಎಸ್. ಟಿ. ಸೋಮಶೇಖರ್ ಮತ್ತಿತರರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಎಸ್. ಟಿ. ಸೋಮಶೇಖರ್ ಮತ್ತಿತರರು

ಬೆಂಗಳೂರು: ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಸರಳ ದಸರಾ ಆಚರಣೆಗೆ ಸರ್ಕಾರ ತೀರ್ಮಾನಿಸಿದೆ. ಅಕ್ಟೋಬರ್ ನಲ್ಲಿ ಕೋವಿಡ್ ಮೂರನೇ ಅಲೆ ರಾಜ್ಯಕ್ಕೆ ಅಪ್ಪಳಿಸುತ್ತಿರುವುದರಿಂದ ಆರೋಗ್ಯ ತಾಂತ್ರಿಕ ತಜ್ಞರ ಸಲಹೆ ಮೇರೆಗೆ ಸರಳ ದಸರಾವನ್ನು ಈ ಬಾರಿಯೂ ಆಚರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ದಸರಾ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಚಟುವಟಿಕೆಗಳು ನಡೆಯುತ್ತಿತ್ತು. ಈಗ ದಸರಾ ಸರಳ ಆಚರಣೆ ಮಾಡಿದ್ದರಿಂದ ಅವರ ಆರ್ಥಿಕ ಚಟುವಟಿಕೆ ಹೊಡೆತ ಬಿದ್ದಿದೆ. ಇದರಿಂದ ಅವರಿಗೆ ಪಾರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಕಳೆದ ಬಾರಿಯ 8 ಕೋಟಿ ಬಾಕಿ ಹಣ ಬಿಡುಗಡೆ ಮಾಡಿ, ಹೊಸದಾಗಿ 6 ಕೊಟಿ ರೂ. ಬಿಡುಗಡೆ ಮಾಡಲಾಗಿದೆ. ಮಾಡಿರುವ ವೆಚ್ಚದ ಲೆಕ್ಕ ತಕ್ಷಣ ಕೊಡಬೇಕು ಎಂದು ಸಂಬಂಧಪಟ್ಟವರಿಗೆ ಸೂಚಿಸಿರುವುದಾಗಿ ಹೇಳಿದರು. ಚಾಮರಾಜನಗರ ಹಾಗೂ ಶ್ರೀರಂಗಪಟ್ಟಣ ದಸರಾ ಆಚರಣೆಯ ಬಗ್ಗೆಯೂ ಚರ್ಚೆಯಾಗಿದೆ. ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕು ಎಂದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಅರಮನೆ ಒಳಗೆ ಜಂಬು ಸವಾರಿ ಮಾಡಲಾಗುವುದು, ಚಾಮರಾಜನಗರ, ಹಾಸನ ಟೂರಿಸಂ ಸರ್ಕಿಟ್ ಮಾಡಬೇಕಿದೆ. ಈಗಿರುವ ಟೂರಿಸಂ ಪಾಲಿಸಿ ಆಧಾರದಲ್ಲಿ ಲೋಕಲ್ ಬೇಸ್ ಟೂರಿಸಂ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com