ಮತದಾನದಲ್ಲಿ ತೊಡಗಿರುವ ಮತದಾರರು
ಮತದಾನದಲ್ಲಿ ತೊಡಗಿರುವ ಮತದಾರರು

ಪಾಲಿಕೆ ಪೈಪೋಟಿ: ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ ಧಾರವಾಡದಲ್ಲಿ ಮತದಾನ ಆರಂಭ

ಮೂರು ಜಿಲ್ಲೆಗಳಲ್ಲಿನ ಮಹಾನಗರ ಪಾಲಿಕೆ ಚುನಾವಣಾ ಮತದಾನ ಆರಂಭವಾಗಿದ್ದು, ಸರತಿ ಸಾಲಲ್ಲಿ ನಿಂತು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಳಗಾವಿ: ಮೂರು ಜಿಲ್ಲೆಗಳಲ್ಲಿನ ಮಹಾನಗರ ಪಾಲಿಕೆ ಚುನಾವಣಾ ಮತದಾನ ಆರಂಭವಾಗಿದ್ದು, ಸರತಿ ಸಾಲಲ್ಲಿ ನಿಂತು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಳಗ್ಗೆ 7 ಗಂಟೆಯಿಂದಲೇ 3 ಮಹಾನಗರ ಪಾಲಿಕೆಗಳಿಗೆ ಮತದಾನ ಆರಂಭವಾಗಿದ್ದು ಬೆಳಗಾವಿ ಮಹಾನಗರ ಪಾಲಿಕೆ, ಕಲಬುರಗಿ ಮಹಾನಗರ ಪಾಲಿಕೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭವಾಗಿದೆ. 

ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊವಿಡ್ ಮಾರ್ಗಸೂಚಿ ಪಾಲಿಸಿ ಪಾಲಿಕೆಗಳ ಚುನಾವಣೆ ನಡೆಯುತ್ತಿದೆ. ಸೆಪ್ಟೆಂಬರ್ 6ರಂದು ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಬಂಡಾಯ ಅಭ್ಯರ್ಥಿಗಳ ತಲೆನೋವಿನಿಂದ ಹಾಲಿ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿದ್ದು, ಶತಾಯಗತಾಯ ಗೆಲ್ಲಲೇಬೇಕು ಎಂಬ ಧೋರಣೆಯಲ್ಲಿವೆ. ಅಲ್ಲದೆ ಇದೇ ಮೊದಲ ಬಾರಿಗೆ ಈ ಮೂರೂ ಪಾಲಿಕೆಗಳಲ್ಲಿ ವ್ಯಕ್ತಿಗಳ ಬದಲಿಗೆ ಪಕ್ಷಗಳ ಚಿನ್ಹೆಗಳ ಮೂಲಕ ಚುನಾವಣೆ ಎದುರಿಸಲಾಗುತ್ತಿದ್ದು, ಈ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಕಾದು ನೋಡಬೇಕಿದೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ
ಬೆಳಗಾವಿ ಪಾಲಿಕೆಯ 58 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದ್ದು, ಪಾಲಿಕೆ ಚುನಾವಣಾ ಕಣದಲ್ಲಿ 385 ಅಭ್ಯರ್ಥಿಗಳಿದ್ದಾರೆ. ಒಟ್ಟು 4,28,364 ಮತದಾರರಿದ್ದು, ಮತದಾನಕ್ಕಾಗಿ ಒಟ್ಟು 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 ಸೂಕ್ಷ್ಮ, 42 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣೆ ಕರ್ತವ್ಯಕ್ಕೆ 1,828 ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು 58 ವಾರ್ಡ್‌ಗಳ ಪೈಕಿ 55ರಲ್ಲಿ ಬಿಜೆಪಿ, 45ರಲ್ಲಿ ಕಾಂಗ್ರೆಸ್, 11 ವಾರ್ಡ್‌ಗಳಲ್ಲಿ ಜೆಡಿಎಸ್, 21ರಲ್ಲಿ ಎಂಇಎಸ್, 27 ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧೆ ನಡೆಸಿತ್ತಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ
ಕಲಬುರಗಿ ಪಾಲಿಕೆಯ 55 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದೆ. ಪಾಲಿಕೆ ಚುನಾವಣಾ ಕಣದಲ್ಲಿ 300 ಅಭ್ಯರ್ಥಿಗಳಿದ್ದಾರೆ. ಇಲ್ಲಿ 5,19,464 ಮತದಾರರಿದ್ದು, 55 ವಾರ್ಡ್‌ಗಳ ಪೈಕಿ 47ರಲ್ಲಿ ಬಿಜೆಪಿ, 55ರಲ್ಲಿ ಕಾಂಗ್ರೆಸ್, 45 ವಾರ್ಡ್‌ಗಳಲ್ಲಿ ಜೆಡಿಎಸ್, 20ರಲ್ಲಿ ಎಐಎಂಐಎಂ, 26 ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ
ಹುಬ್ಬಳ್ಳಿ-ಧಾರವಾಡ ಪಾಲಿಕೆಯ 82 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದ್ದು ಪಾಲಿಕೆ ಚುನಾವಣಾ ಕಣದಲ್ಲಿ 420 ಅಭ್ಯರ್ಥಿಗಳಿದ್ದಾರೆ. ಇಲ್ಲಿ 8,11,632 ಮತದಾರರಿದ್ದು, 82 ವಾರ್ಡ್‌ಗಳ ಪೈಕಿ 82ರಲ್ಲಿ ಬಿಜೆಪಿ, 65ರಲ್ಲಿ ಕಾಂಗ್ರೆಸ್, 49 ವಾರ್ಡ್‌ಗಳಲ್ಲಿ ಜೆಡಿಎಸ್, 11ರಲ್ಲಿ ಎಐಎಂಐಎಂ, 41 ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು, 122 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಸ್ಪರ್ಧೆ ನಡೆಸುತ್ತಿದ್ದಾರೆ.
 

Related Stories

No stories found.

Advertisement

X
Kannada Prabha
www.kannadaprabha.com