'ರೈತರೊಂದಿಗೆ ಚರ್ಚೆಗೆ ಕೇಂದ್ರ ಸಿದ್ಧ, ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘ ಸ್ಥಾಪನೆ': ಶೋಭಾ ಕರಂದ್ಲಾಜೆ

ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ‌ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಲಬುರಗಿ: ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ‌ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಹಾಗೂ ಆರ್ಥಿಕವಾಗಿ ‌ಹಿಂದುಳಿದ ರೈತರಿಗೆ ನೆರವು ನೀಡುವ ಉದ್ದೇಶದಿಂದ 10 ಸಾವಿರ ‌ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ‌ಎಂದರು.

ರೈತರು ಆತ್ಮಹತ್ಯೆ ಆಲೋಚನೆ ಬಿಡಬೇಕು
ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಯೋಜನೆಯ ಲಾಭ ಪಡೆದು ಆತ್ಮಹತ್ಯೆ ಆಲೋಚನೆ ಬಿಡಬೇಕು. ರೈತರಿಗೆ ಆದಾಯ ಬರಬೇಕೆಂದರೆ ಮಾರ್ಕೆಟ್ ಸಿಗಬೇಕು. ಪ್ರಮುಖ ಬೆಳೆ ಜೊತೆಗೆ ಪರ್ಯಾಯ ಕೃಷಿ ಇರಬೇಕು ಎಂದು ಅವರು ಕಿವಿಮಾತು ಹೇಳಿದರು. 

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ‌ ಮುನ್ನ ಕೃಷಿ ಇಲಾಖೆಗೆ ₹ 23 ಸಾವಿರ ‌ಕೋಟಿ ಹಂಚಿಕೆಯಾಗುತ್ತಿತ್ತು. ಇಡೀ ದೇಶದ ಜನಕ್ಕೆ ಇಷ್ಟು ಹಣ ಬಹಳ ಕಡಿಮೆಯಾಗಿತ್ತು. ಹೀಗಾಗಿ ರೈತರ ನೆರವಿಗೆ ಬರುವ ನಿಟ್ಟಿನಲ್ಲಿ ಮೋದಿ ಅವರು 1.23 ಲಕ್ಷ‌ ಕೋಟಿ ರೂ ಹಣವನ್ನು ಕೃಷಿ ಇಲಾಖೆಗೆ ಹಾಗೂ ಭಾರತೀಯ ‌ಕೃಷಿ ಸಂಶೋಧನಾ ಸಂಸ್ಥೆಗೆ (ಐಸಿಎಆರ್) 8,500 ಕೋಟಿ ರೂ ಹಂಚಿಕೆ ‌ಮಾಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಕಾಫಿ, ಮೆಣಸು, ರೋಸ್ ಈರುಳ್ಳಿಗೆ ಸೃಷ್ಟಿಯಾದಂತೆ ರೈತರ ಇತರೆ ಉತ್ಪನ್ನಗಳಿಗೆ ಕ್ಲಸ್ಟರ್ ಆಧಾರಿತ ಮಾರುಕಟ್ಟೆಯನ್ನು ಸೃಷ್ಟಿಸಲು ‌ಕೇಂದ್ರ ಸರ್ಕಾರ ಮುಂದಾಗಿದೆ. ಜಿಡಿಪಿಯಲ್ಲಿ ಒಟ್ಟಾರೆ ಕೃಷಿ ಪಾಲು ಮುಂಚೆ ಶೇ 13ರಷ್ಟಿತ್ತು. ಅದನ್ನು ಶೇ 20ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಶೇ 25ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಈ ಭಾಗದಲ್ಲಿ ಬೆಳೆಯುವ ತೊಗರಿಗೆ ಬೆಂಬಲ ಬೆಲೆ ಹೆಚ್ಚಿಸುವ ಪ್ರಸ್ತಾವ ಬೆಲೆ ಆಯೋಗದ ‌ಮುಂದಿದೆ ಎಂದು ಸ್ಪಷ್ಟಪಡಿಸಿದರು. 

ರೈತರ ಜೊತೆ ಚರ್ಚೆಗೆ ಈಗಲೂ ಸಿದ್ಧ
ದೆಹಲಿಯಲ್ಲಿ ರೈತರ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೋರಾಟ ನಿರತ ರೈತರ ಜೊತೆ 11 ಸುತ್ತು ಮಾತುಕತೆ ಆಗಿದೆ. ರೈತರ ಜೊತೆ ಮಾತನಾಡಲು ನಾವು ಸಿದ್ಧರಿದ್ದೇವೆ. ಆದರೆ ಕೃಷಿ ಕಾಯ್ದೆ ಬಿಲ್ ಯಾಕೆ ಮಾಡಿದ್ದೇವೆ ಎನ್ನುವುದನ್ನು ಹೋರಾಟ ನಿರತ ರೈತರು ಅರ್ಥ ಮಾಡಿಕೊಳ್ಳಬೇಕು ಎಂದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com