ಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು: ಬೆಂಗಳೂರು ಮೂಲದ ಶಂಕಿತನ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಇಸಿಸ್ ಸೇರಿದಂತೆ ಇನ್ನಿತರ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಆರೋಪದಡಿ ಬಂಧಿತನಾಗಿದ್ದ ಶಂಕಿತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಇಸಿಸ್ ಸೇರಿದಂತೆ ಇನ್ನಿತರ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಆರೋಪದಡಿ ಬಂಧಿತನಾಗಿದ್ದ ಶಂಕಿತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. 

ಆರೋಪಿ ಉಗ್ರಗಾಮಿ ಶಿಹಾಬುದ್ದೀನ್ ವಿರುದ್ಧ ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ, ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಶಿಹಾಬುದ್ದೀನ್ ಭಯೋತ್ಪಾದನಾ ಚಟುವಟಿಕೆಯ ಪಿತೂರಿಯ ದೊಡ್ಡ ಭಾಗವಾಗಿದ್ದು, ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ದೋಷಾರೋಪ‌ಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ಉಗ್ರಗಾಮಿ ಸಂಘಟನೆಯ ನಂಟಿದ್ದ ಬೆಂಗಳೂರು ಮೂಲದ ಮೆಹಬೂಬ್ ಪಾಷಾ ಮತ್ತು 16 ಜನರನ್ನು ದಕ್ಷಿಣ ಭಾರತದಲ್ಲಿ ಯುವ ಮುಸ್ಲಿಮರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ತಂಡ ರಚನೆಯ ಆರೋಪದಲ್ಲಿ ಎನ್‌ಐಎ ಬಂಧಿಸಿತ್ತು‌. 

ಈ ಪ್ರಕರಣದ ಭಾಗವಾಗಿ ಉಗ್ರಗಾಮಿ ಶಿಹಾಬುದ್ದೀನ್‌ನ ವಿರುದ್ಧ ಇದೀಗ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಈ ತಂಡ ಬೆಂಗಳೂರನ್ನು ಕೇಂದ್ರ‌ವಾಗಿರಿಸಿಕೊಂಡು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವಾರು ಕ್ರಿಮಿನಲ್ ಪಿತೂರಿ ಸಭೆಗಳನ್ನು ನಡೆಸಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಭಯೋತ್ಪಾದಕ ಕೃತ್ಯಗಳು, ಹಿಂದೂ ನಾಯಕರ ಹತ್ಯೆಗೆ ಸಂಬಂಧಿಸಿದಂತೆ ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಉಗ್ರ ಮೊಯ್ದೀನ್ ಎಂಬಾತನೊಂದಿಗೆ ಸೇರಿ ಈ ಎಲ್ಲಾ ಕೃತ್ಯಗಳ ಭಾಗವಾಗಿದ್ದು, ಈ ಹಿನ್ನೆಲೆಯಲ್ಲಿ ಶಿಹಾಬುದ್ದೀನ್ ವಿರುದ್ಧ ದೋಷಾರೋಪ‌ಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com