ಬೆಂಗಳೂರು: ಟೆಕ್ಕಿ ಮೇಲೆ ಅತ್ಯಾಚಾರ, ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

ಮದ್ಯ ಕುಡಿಸಿ ನಶೆ ಬಂದ ಬಳಿಕ ನೈಜೀರಿಯಾ ಪ್ರಜೆಗಳಿಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು  ಟೆಕ್ಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮದ್ಯ ಕುಡಿಸಿ ನಶೆ ಬಂದ ಬಳಿಕ ನೈಜೀರಿಯಾ ಪ್ರಜೆಗಳಿಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು  ಟೆಕ್ಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿ ನಿವಾಸಿ ಟೋನಿ(35) ಹಾಗೂ ಉಬಾಕಾ(36) ಬಂಧಿತ ಆರೋಪಿಗಳಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಡಿಸಿಪಿ ಡಾ. ಎಸ್‌.ಡಿ. ಶರಣಪ್ಪ ತಿಳಿಸಿದ್ದಾರೆ. ಯುವತಿ ಮೂಲತಃ ಆಂಧ್ರಪ್ರದೇಶದವಳಾಗಿದ್ದು, ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದಾರೆ. 

ಆರೋಪಿಗಳಿಬ್ಬರು ಕಮ್ಮನಹಳ್ಳಿ ನಿವಾಸಿಗಳಾಗಿದ್ದು ಬಟ್ಟೆ ವ್ಯಾಪಾರ ಮಾಡುತ್ತಿದ್ದರು. ಮದ್ಯ ಸೇವಿಸಿದ ಬಳಿಕ ತನಗೆ ನಶೆ ಬಂದಿದ್ದು, ಈ ವೇಳೆ ತನ್ನ ಮೇಲೆ ಅತ್ಯಾಚಾರ ನಡೆದಿದೆ. ತನಗೆ ಪ್ರಜ್ಞೆ ಬಂದ ಬಳಿಕ ನೋಡಿದಾಗ ತನ್ನ ಜತೆ ಉಬಾಕ ಬೆತ್ತಲೆಯಾಗಿದ್ದ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ. ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿಗಳಿಬ್ಬರನ್ನು ಬಂಧಿಸಿ, ಜೈಲಿಗಟ್ಟಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com