ಸಿದ್ದರಾಮಯ್ಯ 'ಜಾತಿ ನಾಯಕ' ಚರ್ಚೆಗೆ ಗ್ರಾಸವಾದ ನಟ ಚೇತನ್ ಹೇಳಿಕೆ!
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಪರ ಹೆಚ್ಚು ಒಲವಿದೆ ಎನ್ನಲಾಗುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಟ ಹೋರಾಟಗಾರ ಚೇತನ್ ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Published: 05th September 2021 06:06 PM | Last Updated: 05th September 2021 06:10 PM | A+A A-

ಸಿದ್ದರಾಮಯ್ಯ, ನಟ ಚೇತನ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಪರ ಹೆಚ್ಚು ಒಲವಿದೆ ಎನ್ನಲಾಗುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಟ ಹೋರಾಟಗಾರ ಚೇತನ್ ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಚೇತನ್, ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕ ಸಿದ್ದರಾಮಯ್ಯ ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು ಎಂದು ಅಭಿಪ್ರಾಯಪಟ್ಟಿದ್ದಾರೆ.
ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ಜಾತಿ ವಿರೋಧಿ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯ ಅವರ ಸೇವೆ ಹುಟ್ಟಿದ ಜಾತಿಗೆ ಮಾತ್ರ ಸೀಮಿತವಾಗಿದ್ದು, ಇತರೆ ಬಹು ಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ ಎಂದು ಹೇಳಿದ್ದಾರೆ.
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) September 4, 2021
ಚೇತನ್ ಅವರ ಹೇಳಿಕೆಗೆ ಕರ್ನಾಟಕ ಜನಾಧಿಕಾರದ ಪಕ್ಷದ ಅಧ್ಯಕ್ಷ ಬಿ. ಹರೀಶ್ ಕುಮಾರ್ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.