ಪ್ರಸಕ್ತ ಶೈಕ್ಷಣಿಕ ವರ್ಷ 5 ಸಾವಿರ ಶಿಕ್ಷಕರ ನೇಮಕ: ಸಿಎಂ ಬಸವರಾಜ ಬೊಮ್ಮಾಯಿ 

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದರು.

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿನ್ನೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ನಮ್ಮ ಶಾಲೆ, ನನ್ನ ಕೊಡುಗೆ' ಆಪ್ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳಿಗೆ ಕೊಡುಗೆ ನೀಡಲು ಸಹಾಯಕವಾಗುತ್ತಿದೆ ಎಂದರು. ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಅವರು, ಎನ್ ಇಪಿ ವಿದ್ಯಾರ್ಥಿ ಸ್ನೇಹಿ ಯೋಜನೆ. ಈ ಕ್ರಾಂತಿಕಾರಿ ನೀತಿಯನ್ನು ಸದ್ಭಳಕೆ ಮಾಡಿಕೊಂಡು ಶಾಲೆಗಳು, ಶಿಕ್ಷಕರು ಮತ್ತು ಸರ್ಕಾರವನ್ನು ಒಗ್ಗೂಡಿಸಿಕೊಂಡು ಶಿಕ್ಷಣ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಗೆ ಸಿದ್ಧತೆ ನಡೆಸಿಕೊಳ್ಳಬೇಕು ಎಂದರು.

ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಶಿಕ್ಷಕರು ಮಾಡಿರುವ ಕೆಲಸಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಶ್ಲಾಘಿಸಿದರು. ರಾಜ್ಯದಲ್ಲಿ ಕಳೆದ ವರ್ಷ ಸಾಂಕ್ರಾಮಿಕ ಕಂಡುಬಂದ ನಂತರ 31 ಶಿಕ್ಷಕರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com