ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 243 ಸೇರಿ ಇಂದು 973 ಪ್ರಕರಣ ಪತ್ತೆ; 17 ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,56,137ಕ್ಕೆ ಏರಿಕೆಯಾಗಿದೆ.
Published: 06th September 2021 05:52 PM | Last Updated: 06th September 2021 05:52 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,56,137ಕ್ಕೆ ಏರಿಕೆಯಾಗಿದೆ.
ಮಹಾಮಾರಿಗೆ ಇಂದು 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,426ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಈ ದಿನದ ಪ್ರಮುಖ ಸುದ್ದಿಗಳ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ಇಂದು 243 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,38,834ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 1,071 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,01,299ಕ್ಕೆ ಏರಿಕೆಯಾಗಿದೆ. ಇನ್ನು17,386 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,39,090 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 973 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.69ಕ್ಕೆ ಇಳಿದಿದೆ.
Covid numbers in Karnataka today:
— Dr Sudhakar K (@mla_sudhakar) September 6, 2021
◾New cases in State:973
◾New cases in B'lore: 243
◾Positivity rate: 0.69%
◾Discharges: 1,071 (B'lore- 260)
◾Deaths:17 (B'lore- 08)
◾Active cases in State: 17,386
◾Active cases in B'lore: 7,180
◾Tests: 1,39,090#COVID19