ಕಲಬುರಗಿ ಪಾಲಿಕೆ ಫಲಿತಾಂಶ: 4 ಸ್ಥಾನ ಗೆದ್ದ ಜೆಡಿಎಸ್ ಕಿಂಗ್ ಮೇಕರ್, ತೆನೆ ಕೈಹಿಡಿದವರಿಗೆ ಮೇಯರ್ ಪಟ್ಟ

ಕಾಂಗ್ರೆಸ್ ಭದ್ರಕೋಟೆ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಗೆ ಟಕ್ಕರ್ ಕೊಟ್ಟಿದೆ. 
ಕಾಂಗ್ರೆಸ್-ಜೆಡಿಎಸ್-ಬಿಜೆಪಿ
ಕಾಂಗ್ರೆಸ್-ಜೆಡಿಎಸ್-ಬಿಜೆಪಿ

ಕಲುಬುರಗಿ: ಕಾಂಗ್ರೆಸ್ ಭದ್ರಕೋಟೆ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಗೆ ಟಕ್ಕರ್ ಕೊಟ್ಟಿದೆ. 

ಪಾಲಿಕೆ ಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು ಒಟ್ಟು 55 ವಾರ್ಡ್ ಗಳ ಪೈಕಿ 27 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ 23 ವಾರ್ಡ್ ಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಕಠಿಣ ಪೈಪೋಟಿ ನೀಡಿದೆ. 

ಇನ್ನು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್ ಕಿಂಗ್ ಮೇಕರ್ ಆಗಿದ್ದು ತೆನೆ ಯಾವ ಪಕ್ಷದ ಕೈಯಿಡಿಯುತ್ತದೆಯೋ ಆ ಪಕ್ಷಕ್ಕೆ ಮೇಯರ್ ಪಟ್ಟ ಸಿಗಲಿದೆ. ಇನ್ನು ಓರ್ವ ಪಕ್ಷೇತ್ತರ ಅಭ್ಯರ್ಥಿ ಕಲಬುರಗಿಯಲ್ಲಿ ಗೆಲುವು ಸಾಧಿಸಿದ್ದಾರೆ. 

ಇಲ್ಲಿ ಮೇಯರ್ ಆಯ್ಕೆಗೆ 28 ಸದಸ್ಯರ ಬೆಂಬಲ ಬೇಕಿದ್ದು, ಕಾಂಗ್ರೆಸ್ ಗೆ ಏಕೈಕ ಪಕ್ಷೇತರ ಸದಸ್ಯನ ಬೆಂಬಲ ಸಿಕ್ಕರೂ ಸಾಕು, ಅಧಿಕಾರ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಜೆಡಿಯೂನ ನಾಲ್ವರು ಹಾಗೂ ಓರ್ವ ಪಕ್ಷೇತ್ತರ ಅಭ್ಯರ್ಥಿ ಬಿಜೆಪಿಗೆ ಬೆಂಬಲ ನೀಡಿದರೆ ಬಿಜೆಪಿ ಅಧಿಕಾರ ನಡೆಸುವ ಸಾಧ್ಯತೆ ಇದೆ. ಅದಾಗ್ಯೂ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಪಕ್ಷದ ಸದಸ್ಯರನ್ನು ಸೆಳೆಯಲು ಯತ್ನಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com