ಪಾಲಿಕೆ ಪೈಪೋಟಿ: ಬೆಳಗಾವಿಯಲ್ಲಿ ಇತಿಹಾಸ ಬರೆದ ಬಿಜೆಪಿ, ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ

3 ನಗರಗಳ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿರುವಂತೆಯೇ ಅತ್ತ ಬೆಳಗಾವಿಯಲ್ಲಿ ಆಡಳಿತಾ ರೂಢ ಬಿಜೆಪಿ ಪಕ್ಷ ಇತಿಹಾಸ ಬರೆದಿದೆ.
ಬಿಜೆಪಿ
ಬಿಜೆಪಿ

ಬೆಂಗಳೂರು: 3 ನಗರಗಳ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿರುವಂತೆಯೇ ಅತ್ತ ಬೆಳಗಾವಿಯಲ್ಲಿ ಆಡಳಿತಾ ರೂಢ ಬಿಜೆಪಿ ಪಕ್ಷ ಇತಿಹಾಸ ಬರೆದಿದೆ.

ಬೆಳಗಾವಿ ಮಹಾನಗರ ಪಾಲಿಕೆಯ ಒಟ್ಟು 58 ಕ್ಷೇತ್ರಗಳ ಪೈಕಿ 36 ವಾರ್ಡುಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ಆ ಮೂಲಕ ಕುಂದಾ ನಗರಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಹಾಲಿ ಚುನಾವಣೆಯಲ್ಲಿ ಭಾರಿ ಸದ್ದು ಮಾಡಿದ್ದ ಮಹಾರಾಷ್ಚ್ರ ಏಕೀಕರಣ ಸಮಿತಿ (ಎಂಇಎಸ್)ಗೆ ಭಾರಿ ಮುಖಭಂಗವಾಗಿದ್ದು, ಕೇವಲ ಸ್ಥಾನಗಳಿಗೆ ಮಾತ್ರ ತೃಪ್ತಿ ಪಟ್ಟುಕೊಂಡಿದೆ. ಉಳಿದಂತೆ ಕಾಂಗ್ರೆಸ್ 9 ವಾರ್ಡ್ ಗಳಲ್ಲಿ ಮತ್ತು ಇತರರು 11 ವಾರ್ಡ್ ಗಳಲ್ಲಿ ಜಯ ಸಾಧಿಸಿದ್ದಾರೆ. 

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 25 ವರ್ಷಗಳ ಬಳಿಕ ಚಿಹ್ನೆ ಮುಂದಿಟ್ಟುಕೊಂಡು ಸ್ಪರ್ಧಿಸಿದ್ದ ಬಿಜೆಪಿಗೆ, ಹಾಲಿ ಚುನಾವಣೆ ಫಲ ನೀಡಿದೆ. ಬೆಳಗಾವಿ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರುತ್ತಿದೆ.  

ಗೆಲುವಿನ ಖಾತೆ ತೆರೆದ ಬಿಜೆಪಿ, ಎಂಇಎಸ್
15ನೇ ವಾರ್ಡ್ ನಲ್ಲಿ ಬಿಜೆಪಿಯ ನೇತ್ರಾವತಿ ವಿನೋದ ಭಾಗವತ್,  ವಾರ್ಡ್ ನಂಬರ್ 14 ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ ಶಿವಾಜಿ ಮಂಡೋಳಕರ್ ಮತ್ತು ವಾರ್ಡ್ ನಂಬರ್ 40ರಲ್ಲಿ ಬಿಜೆಪಿಯ ಹೇಮಾ ಕಾಮ್ಕರ್ ಗೆಲುವು ಸಾಧಿಸಿದ್ದಾರೆ. ವಾರ್ಡ್ ನಂಬರ್ 18ರಲ್ಲಿ ಎಐಎಂಐಎಂ ಅಭ್ಯರ್ಥಿ ಶಾಹಿಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಂಬರ್ 11 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಮಿವುಲ್ಲಾ ಮಾಡೆವಾಲೆ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ ವಾರ್ಡ್ ನಂಬರ್ 02 ರ ಕಾಂಗ್ರೆಸ್ ಅಭ್ಯರ್ಥಿ ಮುಜಮಿಲ್ ಡೋನಿಗೆ ಗೆಲುವು. ಆ ಮೂಲಕ ಸತತ ಮೂರನೇ ಬಾರಿಗೆ ಮುಜಮಿಲ್ ಡೋನಿ ಆಯ್ಕೆಯಾದಂತಾಗಿದೆ. ಬೆಳಗಾವಿ ವಾರ್ಡ್ ನಂಬರ್ 12ರ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಜಯ ಲಭಿಸಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮೋದಿನಸಾಬ್ ಮತವಾಲೆ ಜಯಭೇರಿ ಭಾರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com