ತುಳುಗೆ ಅಧಿಕೃತ ಭಾಷೆ ಸ್ಥಾನಮಾನ ಕುರಿತು ಟ್ವಿಟರ್ ಅಭಿಯಾನ: ವ್ಯಾಪಕ ಬೆಂಬಲ

ಕರ್ನಾಟಕದ ಕರಾವಳಿ ಭಾಗದ ನೆಚ್ಚಿನ ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಟ್ವಿಟರ್ ನಲ್ಲಿ ನಡೆದ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 
ತುಳು ಭಾಷೆಗಾಗಿ ಅಭಿಯಾನ
ತುಳು ಭಾಷೆಗಾಗಿ ಅಭಿಯಾನ

ಮಂಗಳೂರು: ಕರ್ನಾಟಕದ ಕರಾವಳಿ ಭಾಗದ ನೆಚ್ಚಿನ ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಟ್ವಿಟರ್ ನಲ್ಲಿ ನಡೆದ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಜೈ ತುಳುನಾಡು ಸಂಘಟನೆ ಸೇರಿದಂತೆ ಹಲವಾರು ಇತರ ತುಳು ಪರ ಸಂಘಟನೆಗಳು ಮತ್ತು ತುಳು ಬೆಂಬಲಿಗರು 24 ಗಂಟೆಗಳ ಟ್ವಿಟರ್ ಅಭಿಯಾನವನ್ನು ನಡೆಸಿದರು, ತುಳುವನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಸಂವಿಧಾನದ ಸಂವಿಧಾನದ ಎಂಟನೇ ಶೆಡ್ಯೂಲ್ ನಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು. 

ಅಂತೆಯೇ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವಂತೆ ಅವರು ದಕ್ಷಿಣ ಕನ್ನಡದಿಂದ ಚುನಾಯಿತ ಪ್ರತಿನಿಧಿಗಳನ್ನು ಒತ್ತಾಯಿಸಿದರು.

ಈ ಬಗ್ಗೆ ಮಾತನಾಡಿದ ಜೈ ತುಳುನಾಡು ಸಂಘಟನೆಯ ಸುದರ್ಶನ್ ಅವರು, ಈ ತಿಂಗಳು ನಡೆಯಲಿರುವ 10 ದಿನಗಳ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಲು ಮತ್ತು ಈ ವಿಷಯವನ್ನು ಪ್ರಸ್ತಾಪಿಸಲು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳನ್ನು ಒತ್ತಾಯಿಸುವುದು ಅಭಿಯಾನದ ಉದ್ದೇಶವಾಗಿದೆ. ತುಳುವನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸುವುದು ಮತ್ತು ಜಿಲ್ಲೆಯ ಕೈಗಾರಿಕಾ ಕಂಪನಿಗಳಲ್ಲಿ ತುಳುವರಿಗೆ ಮೊದಲ ಆದ್ಯತೆ ನೀಡುವುದು ನಮ್ಮ ಬೇಡಿಕೆಯಾಗಿದೆ. ಹೊಸ ಶಿಕ್ಷಣ ನೀತಿ (NEP) ಯ ಅಡಿಯಲ್ಲಿ, ಕನ್ನಡವನ್ನು ಕಡ್ಡಾಯಗೊಳಿಸುವ ಬದಲು ತುಳು ಭಾಷೆಯನ್ನು ಸೇರಿಸಬೇಕು ಎಂದು ಹೇಳಿದರು. 

ಅಲ್ಲದೆ, ಶಾಲೆಗಳಲ್ಲಿ ತುಳುವನ್ನು ಮೂರನೇ ಭಾಷೆಯಾಗಿ ಕಲಿಸಲಾಗುತ್ತಿದೆ. ಆದರೆ ಶಿಕ್ಷಕರ ಸಂಬಳವನ್ನು ತುಳು ಸಾಹಿತ್ಯ ಅಕಾಡೆಮಿ ಒದಗಿಸುತ್ತದೆ. ಇದರ ಜೊತೆಗೆ, ತುಳು ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಸರ್ಕಾರವು ತುಳು ಅಭಿವೃದ್ಧಿ ಮಂಡಳಿಯನ್ನು ರಚಿಸಬೇಕು. ಕರಾವಳಿಯವರೇ ಆದ ಸುನಿಲ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದಾರೆ. ಆದ್ದರಿಂದ, ನಮ್ಮ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಲಾಗುವುದು ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com