ಅಕ್ರಮ ವಿದೇಶಿಗರ ಮೇಲೆ ನಿಗಾ ಇಡಿ: ಪೊಲೀಸರಿಗೆ ಗೃಹ ಸಚಿವ ಆರಗ ಸೂಚನೆ
ರಾಜ್ಯದಲ್ಲಿ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗುರುತಿಸಿ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಈ ಮೂಲಕ ಅಕ್ರಮ, ದೇಶದ್ರೋಹ ಹಾಗೂ ಸಮಾಜ ವಿರೋಧಿ ಕೃತ್ಯಗಳು ನ ಡೆಯದಂತೆ ತಡೆಯಬೇಕು ಎಂದು ರಾಜ್ಯ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
Published: 07th September 2021 08:49 AM | Last Updated: 07th September 2021 08:49 AM | A+A A-

ಆರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯದಲ್ಲಿ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗುರುತಿಸಿ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಈ ಮೂಲಕ ಅಕ್ರಮ, ದೇಶದ್ರೋಹ ಹಾಗೂ ಸಮಾಜ ವಿರೋಧಿ ಕೃತ್ಯಗಳು ನ ಡೆಯದಂತೆ ತಡೆಯಬೇಕು ಎಂದು ರಾಜ್ಯ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ವೀಸಾ ಅವಧಿ ಮುಗಿದಿದ್ದರೂ ನೆಲೆಸಿರುವ ವಿದೇಶಿ ನಾಗರೀಕರು ಯಾವುದೇ ಅಕ್ರಮ ಚಟುವಟಿಕೆ, ದೇಶದ್ರೋಹಿ ಕೃತ್ಯ ಅಥವಾ ಸಮಾಜ ವಿರೋಧಿ ಕೃತ್ಯ ನಡೆಸದಂತೆ ನಿಗಾ ವಹಿಸಬೇಕು. ಜೊತೆಗೆ ಅವರ ಬಗ್ಗೆ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ದಾಖಲಾತಿಗಳನ್ನು ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆಫ್ಘಾನಿಸ್ತಾನದಲ್ಲಿನ ರಾಜಕೀಯ ವ್ಯತ್ಯಾಸದ ಬಳಿಕ ಅಕ್ರಮ ವಿದೇಶಿಗರ ಬಗ್ಗೆ ಮಾಹಿತಿ ಕಲೆ ಹಾಕಲು ಸೂಚಿಸಲಾಗಿದೆ. ಅಕ್ರಮ ವಲಸಿಗರಿಂದ ಯಾವುದೇ ರೀತಿಯಲ್ಲೂ ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ನೆಮ್ಮದಿಗೆ ಭಂಗ ಉಂಟಾಗಬಾರದು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ತಿಳಿಸಿದರು.