ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಫೇಸ್ ಬುಕ್ ಖಾತೆ ಕಿಡಿಗೇಳಿಗಳಿಂದ ದುರ್ಬಳಕೆ!
ಕೆಲವು ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.
Published: 07th September 2021 10:16 AM | Last Updated: 07th September 2021 10:16 AM | A+A A-

ಸಚಿವ ಮುರುಗೇಶ್ ನಿರಾಣಿಯವರ ಫೇಸ್ ಬುಕ್ ಖಾತೆ
ಬೆಂಗಳೂರು: ಕೆಲವು ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.
ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸುತ್ತಿರುವುದು ಗಮನಕ್ಕೆ ಬಂದಿದ್ದು ಇದು ಸತ್ಯಕ್ಕೆ ದೂರವಾಗಿದ್ದು, ಯಾರೂ ನಂಬಿ ವಂಚನೆಗೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಸೈಬರ್ ಕ್ರೈಂಗೆ ದೂರು ನೀಡುತ್ತೇನೆ ಎಂದು ಕೂಡ ಸಚಿವರು ಎಚ್ಚರಿಸಿದ್ದಾರೆ.