ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಜ್ಯದಲ್ಲಿ ಕೊರೋನಾ ಸಾವು ಇಳಿಮುಖ: ಇಂದು 1,074 ಪ್ರಕರಣ ಪತ್ತೆ; 4 ಸಾವು, 5 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 1,074 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,59,164ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 1,074 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,59,164ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 4 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,462ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ. 

ಈ ದಿನದ ಪ್ರಮುಖ ಸುದ್ದಿಗಳ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇಂದು 343 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,40,653ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,136 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,04,683ಕ್ಕೆ ಏರಿಕೆಯಾಗಿದೆ. ಇನ್ನು16,992 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,69,448 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,074 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.63ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com